Publish Date: Mon, 20 Mar 2023 (10:23 IST)
Updated Date: Mon, 20 Mar 2023 (10:20 IST)
ಕೋಲ್ಕತ್ತಾ : ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯ ಅತಿದೊಡ್ಡ ಟಿಆರ್ಪಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದರು.
ತೃಣಮೂಲ ಕಾಂಗ್ರೆಸ್ನ ಆಂತರಿಕ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಕಿಡಿಕಾರಿದರು ಎಂದು ಮೂಲಗಳು ತಿಳಿಸಿವೆ.
ರಾಹುಲ್ ಗಾಂಧಿ ಪ್ರತಿಪಕ್ಷದ ಮುಖವಾಗಿದ್ದರೇ, ಯಾರೂ ಪ್ರಧಾನಿ ಮೋದಿಯನ್ನು ಟೀಕಿಸಲು ಸಾಧ್ಯವಾಗುವುದಿಲ್ಲ. ಇದರಿಂದಾಗಿ ಬಿಜೆಪಿಯು ರಾಹುಲ್ ಗಾಂಧಿ ಅವರನ್ನು ನಾಯಕನಾಗಿ ಇರಿಸಿಕೊಳ್ಳಲು ಬಯಸುತ್ತದೆ ಎಂದು ವಾಗ್ದಾಳಿ ನಡೆಸಿದರು.