Select Your Language

Notifications

webdunia
webdunia
webdunia
webdunia

ಸಂಸದ ಪ್ರಜ್ವಲ್ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಸಿದ್ದರಾಮಯ್ಯಗೆ ರಾಹುಲ್ ಪತ್ರ

Rahul Gandhi

Sampriya

ದೆಹಲಿ , ಶನಿವಾರ, 4 ಮೇ 2024 (14:35 IST)
Photo Courtesy X
ದೆಹಲಿ: ದೇಶವನ್ನೇ ಸಂಚಲನ ಮೂಡಿಸಿದ ಪ್ರಜ್ವಲ್​​ ರೇವಣ್ಣ  ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಸಂತ್ರಸ್ತರಿಗೆ  ರಕ್ಷಣೆ ಕೊಡಬೇಕೆಂದ ಅವರು ಯಾರೇ ಆರೋಪಿಗಳಿದ್ದರು ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಸಹೋದರ, ಮಗನಂತೆ ನೋಡಿಕೊಳ್ಳುತ್ತಿದ್ದ ಮಹಿಳೆಯರನ್ನು ಪ್ರಜ್ವಲ್ ರೇವಣ್ಣ ಅವರು ತುಂಬಾನೇ  ಕ್ರೂರವಾಗಿ ನಡೆಸಿಕೊಂಡಿದ್ದಾರೆ ಎಂದು ಹೇಳಿದರು.

ಅದಲ್ಲದೆ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ಹೊರಹಾಕಿದ ಅವರು, ಪ್ರಜ್ವಲ್ ಅಶ್ಲೀಲ ವಿಡಿಯೋ ಗೊತ್ತಿದ್ದರು ಅವರಿಗೆ ಟಿಕೆಟ್ ನೀಡಿರುವುದು ಆಘಾತದ ವಿಷಯ ಎಂದಿದ್ದಾರೆ.

ಈ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಅವರ ಗಮನಕ್ಕೆ ತಂದರೂ ಅವರ ಪರವಾಗಿ ಪ್ರಚಾರ ಮಾಡಿದ್ದು ಮತ್ತೊಂದು ಶಾಕ್ ನನಗೆ ಎಂದು ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕದಲ್ಲೂ ಕೇರಳದ ಮಾದರಿ ಲವ್ ಜಿಹಾದ್: ಬಿವೈ ವಿಜಯೇಂದ್ರ ಗಂಭೀರ ಆರೋಪ