Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿಗೆ ಮತ್ತೆ ಸಮನ್ಸ್!

ರಾಹುಲ್ ಗಾಂಧಿಗೆ ಮತ್ತೆ ಸಮನ್ಸ್!
ನವದೆಹಲಿ , ಗುರುವಾರ, 16 ಜೂನ್ 2022 (07:03 IST)
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಶುಕ್ರವಾರ ಮತ್ತೆ ಸಮನ್ಸ್ ಜಾರಿ ಮಾಡಿದೆ.
 
ಬುಧವಾರ ದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯದ ಕೇಂದ್ರ ಕಚೇರಿಗೆ ಬೆಳಗ್ಗೆ 11:35ರ ಸುಮಾರಿಗೆ ರಾಹುಲ್ ಗಾಂಧಿ ಆಗಮಿಸಿದರು. ವಿಚಾರಣೆಯ ಮೊದಲ ದಿನ ಸೋಮವಾರದಿಂದ ಸುಮಾರು 30 ಗಂಟೆಗಳ ಕಾಲ ಅವರನ್ನು ವಿಚಾರಣೆ ನಡೆಸಲಾಗಿದೆ.

ಗುರುವಾರ 1 ದಿನದ ವಿನಾಯಿತಿ ನೀಡುವಂತೆ ಕಾಂಗ್ರೆಸ್ ಸಂಸದರು ಕೋರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಹುಲ್ ಗಾಂಧಿ ವಿಚಾರಣೆ ವೇಳೆ ಇಡಿ ಕಚೇರಿಯ ಹೊರಗಡೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆಯ 3 ದಿನವೂ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಗಾಂಧಿಯನ್ನು ಬೆಂಬಲಿಸಿ, ಘೋಷಣೆ ಕೂಗಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿ ತನ್ನ ವ್ಯಾಪ್ತಿಯಲ್ಲಿ ಬರುವ ಶಾಲೆಗಳಿಗೆ ಕೊರೊನಾ ಮಾರ್ಗಸೂಚಿ ಪ್ರಕಟ