ಮಹಾತ್ಮಾಗಾಂಧಿ ಹತ್ಯೆಯಲ್ಲಿ ಆರೆಸ್ಸೆಸ್ ಕೈವಾಡವಿದೆ ಎನ್ನುವ ಆರೋಪ ಮಾಡಿರುವ ರಾಹುಲ್ ಗಾಂಧಿ ಯಾವುದೇ ಕಾರಣಕ್ಕೂ ಕ್ಷಮೆ ಕೋರುವುದಿಲ್ಲ ಬದಲಿಗೆ ವಿಚಾರಣೆ ಎದುರಿಸುತ್ತಾರೆ ಎಂದು ಕಾಂಗ್ರೆಸ್ ಹೇಳಿಕೆ ನೀಡಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲಾ, ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ, ತಾವು ನೀಡಿದ ಹೇಳಿಕೆಗೆ ಬದ್ಧವಾಗಿದ್ದಾರೆ. ಸೂಕ್ತ ಸಮಯದಲ್ಲಿ ಸೂಕ್ತ ವೇದಿಕೆಯಲ್ಲಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತಾರೆ. ಆದರೆ, ಆರೆಸ್ಸೆಸ್‌ಗೆ ಕ್ಷಮೆ ಕೋರುವು ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದರು.
ರಾಹುಲ್ ಗಾಂಧಿ ಆರೆಸ್ಸೆಸ್ ಕ್ಷಮೆಯಾಚಿಸಬೇಕು ಇಲ್ಲವೇ ವಿಚಾರಣೆ ಎದುರಿಸಬೇಕು ಎನ್ನುವ ಸುಪ್ರೀಂಕೋರ್ಟ್ ತೀರ್ಪಿನ ಕುರಿತಂತೆ ಸುರ್ಜೇವಾಲಾ ಪ್ರತಿಕ್ರಿಯೆ ನೀಡಿದ್ದಾರೆ.
ಕೆಲವರು ಮಾಡಿದ ತಪ್ಪಿಗೆ ಸಂಪೂರ್ಣ ಸಂಘಟನೆಯನ್ನು ಹೊಣೆ ಮಾಡಲಾಗದು. ರಾಹುಲ್ ಗಾಂಧಿ ಮಹಾತ್ಮಾ ಗಾಂಧಿ ಹತ್ಯೆಯಲ್ಲಿ ಆರೆಸ್ಸೆಸ್ ಕೈವಾಡವಿದೆ ಎಂದು ಹೇಳಿಕೆ ನೀಡುವುದು ಸೂಕ್ತವಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿತು.
ಸುಪ್ರೀಂಕೋರ್ಟ್‌ನಲ್ಲಿ ಕೇವಲ ವಾದ ಪ್ರತಿವಾದಗಳು ನಡೆದಿವೆ. ಪ್ರಕರಣ ವಿಚಾರಣೆ ಹಂತಕ್ಕೆ ಬಂದಾಗ ರಾಹುಲ್ ಗಾಂಧಿ ತಮ್ಮ ಹೇಳಿಕೆಗೆ ಪೂರಕವಾಗುವ ಸಾಕ್ಷ್ಯಾಧಾರಗಳನ್ನು ಕೋರ್ಟ್‌ಗೆ ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ತಿಳಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.