Webdunia - Bharat's app for daily news and videos

Install App

ರಾಹುಲ್ ಗಾಂಧಿ ಎಂದೆಂದಿಗೂ ಆರೆಸ್ಸೆಸ್ ಕ್ಷಮೆ ಕೋರುವುದಿಲ್ಲ: ಕಾಂಗ್ರೆಸ್

Webdunia
ಬುಧವಾರ, 20 ಜುಲೈ 2016 (12:14 IST)
ಮಹಾತ್ಮಾಗಾಂಧಿ ಹತ್ಯೆಯಲ್ಲಿ ಆರೆಸ್ಸೆಸ್ ಕೈವಾಡವಿದೆ ಎನ್ನುವ ಆರೋಪ ಮಾಡಿರುವ ರಾಹುಲ್ ಗಾಂಧಿ ಯಾವುದೇ ಕಾರಣಕ್ಕೂ ಕ್ಷಮೆ ಕೋರುವುದಿಲ್ಲ ಬದಲಿಗೆ ವಿಚಾರಣೆ ಎದುರಿಸುತ್ತಾರೆ ಎಂದು ಕಾಂಗ್ರೆಸ್ ಹೇಳಿಕೆ ನೀಡಿದೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲಾ, ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ, ತಾವು ನೀಡಿದ ಹೇಳಿಕೆಗೆ ಬದ್ಧವಾಗಿದ್ದಾರೆ. ಸೂಕ್ತ ಸಮಯದಲ್ಲಿ ಸೂಕ್ತ ವೇದಿಕೆಯಲ್ಲಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತಾರೆ. ಆದರೆ, ಆರೆಸ್ಸೆಸ್‌ಗೆ ಕ್ಷಮೆ ಕೋರುವು ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದರು. 
 
ರಾಹುಲ್ ಗಾಂಧಿ ಆರೆಸ್ಸೆಸ್ ಕ್ಷಮೆಯಾಚಿಸಬೇಕು ಇಲ್ಲವೇ ವಿಚಾರಣೆ ಎದುರಿಸಬೇಕು ಎನ್ನುವ ಸುಪ್ರೀಂಕೋರ್ಟ್ ತೀರ್ಪಿನ ಕುರಿತಂತೆ ಸುರ್ಜೇವಾಲಾ ಪ್ರತಿಕ್ರಿಯೆ ನೀಡಿದ್ದಾರೆ.
 
ಕೆಲವರು ಮಾಡಿದ ತಪ್ಪಿಗೆ ಸಂಪೂರ್ಣ ಸಂಘಟನೆಯನ್ನು ಹೊಣೆ ಮಾಡಲಾಗದು. ರಾಹುಲ್ ಗಾಂಧಿ ಮಹಾತ್ಮಾ ಗಾಂಧಿ ಹತ್ಯೆಯಲ್ಲಿ ಆರೆಸ್ಸೆಸ್ ಕೈವಾಡವಿದೆ ಎಂದು ಹೇಳಿಕೆ ನೀಡುವುದು ಸೂಕ್ತವಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿತು.
 
ಸುಪ್ರೀಂಕೋರ್ಟ್‌ನಲ್ಲಿ ಕೇವಲ ವಾದ ಪ್ರತಿವಾದಗಳು ನಡೆದಿವೆ. ಪ್ರಕರಣ ವಿಚಾರಣೆ ಹಂತಕ್ಕೆ ಬಂದಾಗ ರಾಹುಲ್ ಗಾಂಧಿ ತಮ್ಮ ಹೇಳಿಕೆಗೆ ಪೂರಕವಾಗುವ ಸಾಕ್ಷ್ಯಾಧಾರಗಳನ್ನು ಕೋರ್ಟ್‌ಗೆ ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ತಿಳಿಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಸೂಚನೆ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಮುಂದಿನ ಸುದ್ದಿ
Show comments