Webdunia - Bharat's app for daily news and videos

Install App

ಶಾಲಾ ವಾಹನಕ್ಕೆ ರೈಲು ಡಿಕ್ಕಿಹೊಡೆದು 20 ಮಕ್ಕಳ ದಾರುಣ ಸಾವು

Webdunia
ಗುರುವಾರ, 24 ಜುಲೈ 2014 (10:42 IST)
ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ಖಾಸಗಿ ಶಾಲಾವಾಹನಕ್ಕೆ ರೈಲು ಡಿಕ್ಕಿ ಹೊಡೆದು ಶಾಲಾ ಬಸ್ ಚಾಲಕ ಸೇರಿ 20 ಮಕ್ಕಳು ದಾರುಣವಾಗಿ ಮೃತಪಟ್ಟ  ದುರಂತ ಸಂಭವಿಸಿದೆ.  ಮೇದಕ್ ಜಿಲ್ಲೆಯ ಮಾಸಾಯಿಪೇಟೆ ಬಳಿ ಈ ದುರ್ಘಟನೆ ಸಂಭವಿಸಿದೆ.

ತೂಪ್ರಾನ್‌ನಲ್ಲಿರುವ ಕಾಕತೀಯ ಶಾಲೆಗೆ ಈ ಬಸ್ ಸೇರಿದ್ದು,  ಇಸ್ಲಾಂಪುರದಿಂದ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ ಸಿಗ್ನಲ್ ರಹಿತ ರೈಲ್ವೆ ಕ್ರಾಸಿಂಗ್ ದಾಟುತ್ತಿದ್ದಾಗ ವೇಗವಾಗಿ ಬಂದ ನಾಂದೇಡ್ ಪ್ಯಾಸೆಂಜರ್ ರೈಲು  ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.

ತೂಪ್ರಾನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಖಾಸಗಿ ಶಾಲಾ ಬಸ್‌ನಲ್ಲಿ 38 ಮಕ್ಕಳು ಪ್ರಯಾಣಿಸುತ್ತಿದ್ದರು. ತೆಲಂಗಾಣದ ಸಂಸದೀಯ ವ್ಯವಹಾರ ಸಚಿವ ಹರೀಶ್ ರಾವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಈ ಘಟನೆಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments