Select Your Language

Notifications

webdunia
webdunia
webdunia
Tuesday, 1 April 2025
webdunia

ರೈಲ್ವೆ ಇಲಾಖೆ : ಕೆಲಸ ಸಿಗಲಿಲ್ಲ ಎಂದು ಯುವಕ ಆತ್ಮಹತ್ಯೆ

ರೈಲ್ವೆ ಇಲಾಖೆ
ಲಕ್ನೋ , ಮಂಗಳವಾರ, 17 ಜನವರಿ 2023 (15:07 IST)
ಲಕ್ನೋ : ರೈಲ್ವೇ ಇಲಾಖೆಯಲ್ಲಿ ಕೆಲಸ ಸಿಗುತ್ತಿಲ್ಲವೆಂದು ಮನನೊಂದ ಯುವಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದಿದೆ.

ನಾನು ಎಷ್ಟೇ ಪ್ರಯತ್ನ ಮಾಡಿದರೂ ರೈಲ್ವೆ ಇಲಾಖೆಯಲ್ಲಿ ಕೆಲಸ ಸಿಗುತ್ತಿಲ್ಲ. ಹೀಗಾಗಿ ನಾನು ನನ್ನ ಜೀವನವನ್ನು ಕೊನೆಗೊಳಿಸುತ್ತಿದೇನೆ. ನನ್ನ ಹೆತ್ತವರು ತುಂಬಾ ಒಳ್ಳೆಯವರು. ಪ್ರತಿಯೊಬ್ಬರೂ ನನ್ನಂತಹ ತಂದೆ-ತಾಯಿಗಳನ್ನು ಹೊಂದಿರಬೇಕೆಂದು ನಾನು ಬಯಸುತ್ತೇನೆ. ನನ್ನ ಸಾವಿಗೆ ನಾನೇ ಹೊಣೆ ಎಂದು ಯುವಕ ಬರೆದುಕೊಂಡಿದ್ದಾನೆ.

ರೈಲ್ವೆಯಲ್ಲಿ ಕೆಲಸ ಸಿಕ್ಕಿಲ್ಲವೆಂದು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಮೃತದೇಹವನ್ನು ಮರಣೀತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅಲ್ಲದೆ ಸ್ಥಳದಲ್ಲಿ ಡೆತ್ನೋಟ್ ಪತ್ತೆಯಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಸ್ಯಾಂಟ್ರೋ ರವಿಗೆ ನ್ಯಾಯಾಂಗ ಬಂಧನ