ಕೇರಳದಲ್ಲಿ ಮತ್ತೆ ಮಳೆ: ಆರೆಂಜ್ ಅಲರ್ಟ್

Webdunia
ಶುಕ್ರವಾರ, 22 ಅಕ್ಟೋಬರ್ 2021 (12:31 IST)
ತಿರುವನಂತಪುರ : ಕೇರಳದಲ್ಲಿ ಗುರುವಾರ ಗುಡುಗು ಸಿಡಿಲಿನಿಂದ ಕೂಡಿದ ಭಾರಿ ಮಳೆಯಾಗಿದೆ. ರಾಜ್ಯದ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಬಹುದು ಎಂಬ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಪತ್ತನಂತಿಟ್ಟ, ಕೋಟಯಂ, ಇಡುಕ್ಕಿ, ಪಾಲಕ್ಕಾಡ್, ಮಲಪ್ಪುರ, ಕೋಯಿಕ್ಕೋಡ್, ವಯನಾಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರ, ಕೊಲ್ಲಂ, ಆಲಪ್ಪುಳ, ತ್ರಿಶ್ಶೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ಎಂದರೆ ಭಾರಿ ಮಳೆ ಮತ್ತು ಯೆಲ್ಲೋ ಅಲರ್ಟ್ ಎಂದರೆ ಅಲ್ಲಲ್ಲಿ ಸಾಮಾನ್ಯ ಮಳೆ.
ಸಮುದ್ರದಲ್ಲಿ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇದೇ 15ರಿಂದ ರಾಜ್ಯದಲ್ಲಿ ಮಳೆ ಆರಂಭವಾಗಿದೆ. ಹಲವು ಪ್ರದೇಶಗಳಲ್ಲಿ ಭಾರಿ ಮಳೆ ಸುರಿದಿದ್ದು ಅನಾಹುತಕ್ಕೆ ಕಾರಣವಾಗಿದೆ. ಮಳೆ ಸಂಬಂಧಿ ಅವಘಡಗಳಿಂದ ಈವರೆಗೆ 42 ಮಂದಿ ಮೃತಪಟ್ಟಿದ್ದಾರೆ.
ಶಾ ಸಮೀಕ್ಷೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಭಾರಿ ಮಳೆಯಿಂದ ತೀವ್ರ ತೊಂದರೆಗೆ ಒಳಗಾಗಿರುವ ಉತ್ತರಾಖಂಡ ರಾಜ್ಯದ ವಿವಿಧ ಭಾಗಗಳಲ್ಲಿ ಗುರುವಾರ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Vedio: ಹೆಚ್‌ಡಿಕೆ ಸಮ್ಮುಖದಲ್ಲಿ ತೆನೆಹಿಡಿದು ಮೂರನೇ ಇನಿಂಗ್ಸ್‌ ಆರಂಭಿಸಿದ ಬಿಗ್‌ಬಾಸ್‌ ಖ್ಯಾತಿಯ ಜಾಹ್ನವಿ

ಸಿಎಂ ಬದಲಾವಣೆ ವಿಚಾರಕ್ಕೆ ಕ್ಲೈಮ್ಯಾಕ್ಸ್: ಸಿದ್ದರಾಮಯ್ಯ ದೆಹಲಿ ಯಾತ್ರೆಗೆ ಸಾಥ್ ಕೊಡಲಿರುವವರು ಯಾರು

Gold Price: ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮೋದಿ ಮೆಹಂಗಾಯ್ ಮ್ಯಾನ್, ಪ್ರತಿದಿನ ಪೆಟ್ರೋಲ್ ಬೆಲೆ ಹೆಚ್ಚಿಸಿ ಪಿಕ್ ಪಾಕೆಟ್: ರಣದೀಪ್ ಸುರ್ಜೇವಾಲ, ಡಿಕೆಶಿ ಜಂಟಿ ಹೇಳಿಕೆ

ಮುಂದಿನ ಸುದ್ದಿ
Show comments