Webdunia - Bharat's app for daily news and videos

Install App

ರಾಜಸ್ಥಾನ ಸರ್ಕಾರ ಶಾಲೆ ಕಟ್ಟಡ ಕುಸಿದು 7 ಮಕ್ಕಳು ದುರ್ಮರಣ, ಇಬ್ಬರಿಗೆ ಗಂಭೀರ

Sampriya
ಶುಕ್ರವಾರ, 25 ಜುಲೈ 2025 (15:15 IST)
Photo Credit X
ರಾಜಸ್ಥಾನ:  ಜಲಾವರ್ ಜಿಲ್ಲೆಯಲ್ಲಿ ಶುಕ್ರವಾರ ಸರ್ಕಾರಿ ಶಾಲೆಯ ಕಟ್ಟಡ ಕುಸಿದು ಏಳು ಮಕ್ಕಳು ಸಾವನ್ನಪ್ಪಿ, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. 

ಮನೋಹರ ಠಾಣಾ ವ್ಯಾಪ್ತಿಯ ಪಿಪ್ಲೋಡಿ ಸರ್ಕಾರಿ ಶಾಲೆಯಲ್ಲಿ ಬೆಳಗ್ಗೆ 8.30ರ ಸುಮಾರಿಗೆ ಘಟನೆ ನಡೆದಿದೆ. ಒಂದೇ ಅಂತಸ್ತಿನ ಕಟ್ಟಡದ ಮೇಲ್ಛಾವಣಿ ಕುಸಿದಾಗ ಆವರಣದಲ್ಲಿ ಶಿಕ್ಷಕರು ಮತ್ತು ಸಿಬ್ಬಂದಿಗಳಲ್ಲದೆ ಸುಮಾರು 60 ಮಕ್ಕಳು ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಮೂಲಗಳ ಪ್ರಕಾರ, ಕಟ್ಟಡವು ಶಿಥಿಲಾವಸ್ಥೆಯಲ್ಲಿದ್ದು, ಈ ಬಗ್ಗೆ ಈ ಹಿಂದೆ ಹಲವಾರು ದೂರುಗಳು ಬಂದಿದ್ದವು. ಶಾಲೆಯು 8 ನೇ ತರಗತಿಯವರೆಗೆ ಶಿಕ್ಷಣವನ್ನು ನೀಡುತ್ತದೆ. 

ರಕ್ಷಣಾ ಕಾರ್ಯಾಚರಣೆ ಮುಗಿದಿದ್ದು, ಘಟನೆಯಲ್ಲಿ ಆರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ರಾಜಸ್ಥಾನ ಶಿಕ್ಷಣ ಕಾರ್ಯದರ್ಶಿ ಕೃಷ್ಣ ಕುನಾಲ್ ತಿಳಿಸಿದ್ದಾರೆ. 

ಎಲ್ಲಾ ಮಕ್ಕಳು ಎಂಟರಿಂದ 11 ವರ್ಷದೊಳಗಿನವರು. ಇಬ್ಬರು ಮಕ್ಕಳನ್ನು ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ. 

ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಛಾವಣಿಯು ಹಠಾತ್ತನೆ ಕುಸಿದಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯೂರಿಯಾ ಗೊಬ್ಬರ ಕೊಡಿ ಎಂದು ಕೇಂದ್ರ ಸಚಿವರಿಗೆ ಪತ್ರ ಬರೆದ ಸಿದ್ದರಾಮಯ್ಯ

ಧರ್ಮಸ್ಥಳ ಕೇಸ್ ನಲ್ಲಿ ಮಹತ್ವದ ಹೆಜ್ಜೆಯಿಟ್ಟ ಎಸ್ಐಟಿ

ವಿಧಾನಸಭೆಯಲ್ಲಿ ಕಾಂಗ್ರೆಸ್ ಗೆದ್ದಿದ್ದು ಅಕ್ರಮದಿಂದನಾ: ಬಿವೈ ವಿಜಯೇಂದ್ರ

ಸರ್ಕಾರೀ ಅಧಿಕಾರಿಗಳೊಂದಿಗೆ ಸಭೆ ನಡೆಸಲು ರಣದೀಪ್ ಸುರ್ಜೇವಾಲಗೆ ಅಧಿಕಾರ ಕೊಟ್ಟಿದ್ಯಾರು: ಜೆಡಿಎಸ್

ಇಂದಿರಾ ಗಾಂಧಿ ದಾಖಲೆ ಮುರಿದ ಮೋದಿ ಹಾಡಿ ಹೊಗಳಿದ ವಿಜಯೇಂದ್ರ

ಮುಂದಿನ ಸುದ್ದಿ
Show comments