ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹಂತಕ ಪೆರಾರಿವಲನ್ ಜೈಲಿನಿಂದ ಬಿಡುಗಡೆಗೊಳಿಸಿ ಸುಪ್ರೀಂಕೋರ್ಟ್ ಆದೇಶಿಸಿದೆ.
31 ವರ್ಷಗಳ ಕಾಲ ಜೈಲಿನಲ್ಲಿದ್ದ ಪೇರರಿವಾಳನ್ ತಮಿಳುನಾಡು ಸರ್ಕಾರದ ಮನವಿ ಮೇರೆಗೆ ಬಿಡುಗಡೆಗೊಂಡಿದ್ದಾರೆ. ರಾಜೀವ್ ಗಾಂಧಿ ಹತ್ಯೆಯಲ್ಲಿ ಶಾಮೀಲಾಗಿದ್ದ ಏಳು ಮಂದಿಯಲ್ಲಿ ಒಬ್ಬರಾಗಿದ್ದ ಪೇರರಿವಾಳನ್ 30 ವರ್ಷಗಳಿಗೂ ಅಧಿಕ ಕಾಲ ಸೆರೆಮನೆ ವಾಸ ಅನುಭವಿಸಿದ್ದರು.
ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್ ಹಾಗೂ ಬಿ. ಆರ್. ಗವಾಯಿ ಅವರನ್ನೊಳಗೊಂಡ ನ್ಯಾಯಪೀಠವು ಪೆರಾರಿವಾಲ್‍ನನ್ನು ಜೈಲಿನಿಂದ ಬಿಡುಗಡೆಗೊಳಿಸುವಂತೆ ಆದೇಶಿಸಿದೆ.
ಕ್ಷಮಾಪಣೆ ಅರ್ಜಿ ಬಗ್ಗೆ ರಾಷ್ಟ್ರಪತಿಗಳು ನಿರ್ಧರಿಸುವವರೆಗೆ ನ್ಯಾಯಾಲಯ ಕಾಯಬೇಕು ಎಂಬ ಕೇಂದ್ರ ಮನವಿ ಮಾಡಿತ್ತು. ಆದರೆ ರಾಷ್ಟ್ರಪತಿಗಳು ನಿರ್ಧಾರ ಕೈಗೊಳ್ಳುವ ಮೊದಲೇ ಕೋರ್ಟ್ ಬಿಡುಗಡೆ ಮಾಡಲು ಸೂಚಿಸಿದೆ.