ಸೇಕ್ರೆಡ್ ಗೇಮ್ಸ್ ನಲ್ಲಿ ರಾಜೀವ್ ಗಾಂಧಿಗೆ ಅವಹೇಳನ. ಈ ಬಗ್ಗೆ ರಾಹುಲ್ ಗಾಂಧಿ ಹೇಳಿದ್ದೇನು?

Webdunia
ಭಾನುವಾರ, 15 ಜುಲೈ 2018 (09:20 IST)
ನವದೆಹಲಿ : ನೆಟ್‌ಫ್ಲಿಕ್ಸ್‌ನ "ಸೇಕ್ರೆಡ್‌ ಗೇಮ್ಸ್‌'’ ವೆಬ್‌ ಸೀರೀಸ್‌ನಲ್ಲಿ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿರುವ ಬಗ್ಗೆ ಇದೀಗ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.


ಇತ್ತೀಚೆಗೆ ಬಾಲಿವುಡ್ ನಟ ನವಾಝುದ್ದೀನ್ ಸಿದ್ದೀಕಿ ಅವರ ನೆಟ್‌ಫ್ಲಿಕ್ಸ್‌ನ "ಸೇಕ್ರೆಡ್‌ ಗೇಮ್ಸ್‌’' ವೆಬ್‌ ಸೀರೀಸ್‌ನಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಬಗ್ಗೆ ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ ಪಶ್ಚಿಮಬಂಗಾಳದ ಕಾಂಗ್ರೆಸ್ ನಾಯಕ ರಾಜೀವ್ ಕುಮಾರ್ ಸಿನ್ಹಾ ಅವರು ನಟ ಹಾಗೂ ನಿರ್ಮಾಪಕನ ವಿರುದ್ಧ ಗಿರೀಶ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.


ಈ ಬಗ್ಗೆ ಇದೀಗ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ  ರಾಹುಲ್ ಗಾಂಧಿ ಅವರು "ನನ್ನ ಅಪ್ಪ ಭಾರತ ಕ್ಕಾಗಿಯೇ ಬದುಕಿ, ಮಡಿದವರು. ಅದನ್ನು ಬದಲಿಸಲು ಕಾಲ್ಪನಿಕ ಪಾತ್ರವೊಂದಕ್ಕೆ ಸಾಧ್ಯವಿಲ್ಲ’' ಎಂದು ರಾಹುಲ್‌ ಬರೆದುಕೊಂಡಿದ್ದಾರೆ. ಅದರ ಜೊತೆಗೆ  ‘ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಪೊಲೀಸ್‌ಗಿರಿ ಮೂಲಕ ನಿಯಂತ್ರಿಸಬೇಕು ಎಂದು ಬಿಜೆಪಿ/ಆರೆಸ್ಸೆಸ್‌ ಭಾವಿಸುತ್ತದೆ. ಆದರೆ, ನಾವು ಈ ಸ್ವಾತಂತ್ರ್ಯವನ್ನು ಮೂಲಭೂತ ಪ್ರಜಾಸತ್ತಾತ್ಮಕ ಹಕ್ಕು ಎಂದು ನಂಬಿದ್ದೇವೆ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಲು ಯಡಿಯೂರಪ್ಪ ಹಾದಿ ಹಿಡಿದರಾ ಡಿಕೆ ಶಿವಕುಮಾರ್: ರಾತ್ರೋ ರಾತ್ರಿ ಮಾಡಿದ್ದೇನು

Karnataka Weather: ವಾರಂತ್ಯದಲ್ಲಿ ಕರ್ನಾಟಕದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಮುಂದಿನ ಸುದ್ದಿ
Show comments