Select Your Language

Notifications

webdunia
webdunia
webdunia
webdunia

ಉತ್ತರಪ್ರದೇಶ: ರಾಜನಾಥ್ ಸಿಂಗ್ ಬಿಜೆಪಿಯ ಸಿಎಂ ಅಭ್ಯರ್ಥಿ?

ಉತ್ತರಪ್ರದೇಶ: ರಾಜನಾಥ್ ಸಿಂಗ್ ಬಿಜೆಪಿಯ ಸಿಎಂ ಅಭ್ಯರ್ಥಿ?
ನವದೆಹಲಿ , ಭಾನುವಾರ, 29 ಮೇ 2016 (15:53 IST)
ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಸಿಎಂ ಅಭ್ಯರ್ಥಿಯಾಗಿ ಘೋಷಿಸಿದಲ್ಲಿ ರಜಪೂತರ ಮತಗಳನ್ನು ಸೆಳೆಯಬಹುದು ಎಂದು ಬಿಜೆಪಿ ಚಿಂತನೆ ನಡೆಸಿದೆ.
 
ಮುಂದಿನ ವರ್ಷ ಉತ್ತರಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಪ್ರಚಾರದ ಹೊಣೆಯನ್ನು ರಾಜನಾಥ್ ಸಿಂಗ್ ಅವರಿಗೆ ವಹಿಸಲು ಪ್ರದಾನಿ ಮೋದಿ ಬಯಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
 
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆಪ್ತ ಮೂಲಗಳ ಪ್ರಕಾರ, ಲಕ್ನೋ ಸಂಸದರು ಮತ್ತು ಮಾಜಿ ಮುಖ್ಯಮಂತ್ರಿ ರಾಜನಾಥ್ ಸಿಂಗ್ ಹೆಸರನ್ನು ಸಿಎಂ ಅಭ್ಯರ್ಥಿಯಾಗಿ ಘೋಷಿಸುವುದಿಲ್ಲ ಎಂದು ಮಾಹಿತಿ ನೀಡಿವೆ ಎನ್ನಲಾಗಿದೆ.
 
ಉತ್ತರಪ್ರದೇಶದ ಮತದಾರರನ್ನು ಸೆಳೆಯಲು ಈಗಾಗಲೇ ರಣತಂತ್ರ ರೂಪಿಸಿರುವ ಮೋದಿ ಸಹರಣಪುರ್ ಜಿಲ್ಲೆಯಲ್ಲಿ ನಡೆಸಿದ ಸಾರ್ವಜನಿಕ ಸಮಾರಂಭದಲ್ಲಿ ತಾವೊಬ್ಬ ಉತ್ತರಪ್ರದೇಶ ಮೂಲದವರು ಎಂದು ತೋರಿಸಿಕೊಳ್ಳಲು ಬಯಸಿದರು ಎನ್ನಲಾಗಿದೆ.


ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಪಾಕಿಸ್ತಾನ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ