Publish Date: Tue, 02 Jun 2020 (08:09 IST)
Updated Date: Tue, 02 Jun 2020 (08:10 IST)
ನವದೆಹಲಿ : ಕೊರೊನಾ ಭೀತಿಯಿಂದ ಮುಂದೂಡಿಕೆ ಮಾಡಿದ್ದ ರಾಜ್ಯಸಭಾ ಚುನಾವಣೆಯನ್ನು ಜೂನ್ 19 ಕ್ಕೆ ನಡೆಲಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ.
ಆಂಧ್ರಪ್ರದೇಶ, ಗುಜರಾತ್, ಜಾರ್ಖಂಡ್, ಮಧ್ಯಪ್ರದೇಶ, ಮಣಿಪುರ, ಮೇಘಾಲಯ ಮತ್ತು ರಾಜಸ್ಥಾನ ರಾಜ್ಯಗಳ ಒಟ್ಟು 18 ರಾಜ್ಯಸಭಾ ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದೆ. ಜೂನ್ 9ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಜೂನ್ 10ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂನ್ 13ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ ಎಂಬುದಾಗಿ ಚುನಾವಣಾ ಆಯೋಗ ತಿಳಿಸಿದೆ.