Webdunia - Bharat's app for daily news and videos

Install App

ಇಂದು ದೇಶದ 14ನೇ ರಾಷ್ಟ್ರಪತಿಯಾಗಿ ರಾಮನಾಥ ಕೋವಿಂದ್ ಪ್ರಮಾಣವಚನ

Webdunia
ಮಂಗಳವಾರ, 25 ಜುಲೈ 2017 (11:18 IST)
ನವದೆಹಲಿ:ಎನ್ ಡಿಎಯಿಂದ ರಾಷ್ಟ್ರಪತಿ ಹುದ್ದೆಗೆ ಆಯ್ಕೆಯಾಗಿರುವ ರಾಮನಾಥ ಕೋವಿಂದ್ ಇಂದು ದೇಶದ 14ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
 
ಮಧ್ಯಾಹ್ನ  12.15ಕ್ಕೆ ರಾಷ್ಟ್ರಪತಿಯಾಗಿ ಕೋವಿಂದ್ ಪ್ರಮಾಣವಚನ ಸ್ವೀಕರಿಸಲಿದ್ದು, ಸಂಸತ್ ​ನ ಸೆಂಟ್ರಲ್ ಹಾಲ್​ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಜೆ.ಎಸ್.  ಖೇಹರ್, ಕೋವಿಂದ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.
 
ಬಳಿಕ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಕೋವಿಂದಗೆ ರಾಷ್ಟ್ರಪತಿ ಭವನ ಪರಿಚಯಿಸಲಿದ್ದಾರೆ. ಪ್ರಮಾಣವಚನ  ಸ್ವೀಕಾರದ ನಂತರದಲ್ಲಿ ಹೊರಗೆ ರಕ್ಷಣಾ ಸಿಬ್ಬಂದಿ 21 ಸುತ್ತು ಕುಶಾಲು ತೋಪು ಸಿಡಿಸಲಿದ್ದಾರೆ. ಬಳಿಕ 340 ದರ್ಬಾರ್ ಹಾಲ್​ನಲ್ಲಿರುವ ಸಿಂಹಾಸನದಲ್ಲಿ ಸಾಂಕೇತಿಕವಾಗಿ ಕೋವಿಂದರನ್ನು ಕೂರಿಸಿ ಅಧಿಕಾರ  ಹಸ್ತಾಂತರಿಸಲಾಗುತ್ತದೆ.
 
ಕಾರ್ಯಕ್ರಮದಲ್ಲಿ ಸೆಂಟ್ರಲ್ ಹಾಲ್​ನಲ್ಲಿ ರಾಜ್ಯ ಸಭಾಧ್ಯಕ್ಷ, ಉಪರಾಷ್ಟ್ರಪತಿ ಹಮೀದ್ ಅನ್ಸಾರಿ,  ಪ್ರಧಾನಿ ಮೋದಿ, ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಜೆಎಸ್ ಖೆಹರ್,  ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್, ಸಚಿವ ಸಂಪುಟದ ಸದಸ್ಯರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ರಾಜತಾಂತ್ರಿಕ  ಮುಖ್ಯಸ್ಥರು, ಸಂಸತ್ ಸದಸ್ಯರು, ಸಚಿವಾಲಯದ ಉನ್ನತಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments