Webdunia - Bharat's app for daily news and videos

Install App

ರಾಮ ಮಂದಿರ ನಿರ್ಮಿಸದೇ ಓಡಿ ಹೋಗಲು ಸಾಧ್ಯವಿಲ್ಲ: ಸುಬ್ರಹ್ಮಣ್ಯಂ ಸ್ವಾಮಿ

Webdunia
ಬುಧವಾರ, 19 ಅಕ್ಟೋಬರ್ 2016 (14:25 IST)
ಕಳೆದ ಲೋಕಸಭೆ ಚುನಾವಣೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುದಾಗಿ ಬಿಜೆಪಿ ದೇಶದ ಜನತೆಗೆ ಭರವಸೆ ನೀಡಿದೆ. ಭರವಸೆಯನ್ನು ಈಡೇರಿಸದೇ ಓಡಿ ಹೋಗುವಂತಿಲ್ಲ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಹೇಳಿದ್ದಾರೆ.
 
ಕಳೆದ ಲೋಕಸಭೆ ಚುನಾವಣೆ ಪ್ರಚಾರದಲ್ಲಿ ರಾಮ ಮಂದಿರ ನಿರ್ಮಾಣ ವಿಷಯ ಪ್ರಸ್ತಾಪಿಸಿದ್ದೇವೆ. ಒಂದು ವೇಳೆ ಅಧಿಕಾರಕ್ಕೆ ಬಂದರೆ ರಾಮ ಮಂದಿರ ನಿರ್ಮಾಣ ಮಾಡುವುದಾಗಿ ಜನತೆಗೆ ಭರವಸೆ ನೀಡಿದ್ದನ್ನು ಕೇಂದ್ರ ಸರಕಾರ ಮರೆಯಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.
 
ಒತ್ತಾಯಪೂರ್ವಕವಾಗಿ ರಾಮಮಂದಿರ ನಿರ್ಮಾಣ ಸಾಧ್ಯವಿಲ್ಲ. ಆದರೆ, ಸುಪ್ರೀಂಕೋರ್ಟ್‌ನಲ್ಲಿ ಆರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಪ್ರಕರಣಕ್ಕೆ ಅಂತ್ಯ ಹಾಡಬೇಕಾಗಿದೆ ಎಂದು ತಿಳಿಸಿದ್ದಾರೆ.  
 
ಮುಸ್ಲಿಂ ಸಮುದಾಯದವರು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ಎದುರಿಸಲು ಸಿದ್ದರಾಗಿದ್ದಾರೆ. ಕೇಂದ್ರ ಸರಕಾರಕ್ಕೆ ನೋಟಿಸ್ ನೀಡುವಂತೆ ಶೀಘ್ರದಲ್ಲಿಯೇ ಕೋರ್ಟ್‌ಗೆ ಮನವಿ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
 
ಉತ್ತರಪ್ರದೇಶದಲ್ಲಿ ನಡೆಯಲಿರುವ ವಿಧಾನ ಸಭೆ ಚುನಾವಣೆಯಲ್ಲಿ ಮತಗಳನ್ನು ಸೆಳೆಯಲು ಬಿಜೆಪಿ ಶ್ರೀ ರಾಮನ ಹೆಸರನ್ನು ಬಳಕೆ ಮಾಡುತ್ತಿದೆ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments