ನವದೆಹಲಿ: ಎನ್ ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿಯಾಗಿ ರಮಾನಾಥ್ ಕೋವಿಂದ್ ಇಂದು ಸಂಸತ್ ಭವನದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಎನ್ ಡಿಎ ಮೈತ್ರಿಕೂಟದ ದಂಡೇ ಈ ಸಂದರ್ಭದಲ್ಲಿ ಹಾಜರಿದ್ದರು. ಎಲ್.ಕೆ. ಅಡ್ವಾಣಿ, ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಸಂಸತ್ ಭವನಕ್ಕೆ ಆಗಮಿಸಿದ ರಮಾನಾಥ್ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ, ಅನಂತ ಕುಮಾರ್, ನಿತಿನ್ ಗಡ್ಕರಿ, ಸುಷ್ಮಾ ಸ್ವರಾಜ್, ಯುಪಿ ಸಿಎಂ ಯೋಗಿ ಆದಿತ್ಯನಾಥ್, ತಮಿಳುನಾಡು ಮತ್ತು ಆಂಧ್ರ ಪ್ರದೇಶ ಸೇರಿದಂತೆ ಎನ್ ಡಿಎ ಮೈತ್ರಿಕೂಟದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಉಪಸ್ಥಿತರಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ