Publish Date: Mon, 11 Dec 2023 (12:02 IST)
Updated Date: Mon, 11 Dec 2023 (12:01 IST)
ಮುಂಬರುವ ಲೋಕಸಭೆ ಚುನಾವಣೆಯಲ್ಲಿಸೋನಿಯಾ ಗಾಂಧಿ ಸ್ಪರ್ಧಿಸುವ ಕ್ಷೇತ್ರ ಮತ್ತು ರಾಹುಲ್ ಕ್ಷೇತ್ರದಲ್ಲಿ ಅವರ ವಿರುದ್ಧ ವಿಶೇಷವಾಗಿ ಪ್ರಚಾರ ನಡೆಸಿ ಸೋಲಿಗೆ ಕಾರಣವಾಗುತ್ತೇನೆ ಎಂದು ಯೋಗಾ ಗುರು ಬಾಬಾ ರಾಮದೇವ್ ಗುಡುಗಿದ್ದಾರೆ.
ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷೆ ಸೋನಿಯಾಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಪ್ರಚಾರಕ್ಕೆ ಇಳಿಯುವುದಾಗಿ ಯೋಗಾ ಗುರು ಬಾಬಾ ರಾಮದೇವ್ ಹೇಳಿದ್ದಾರೆ.
ನರೇಂದ್ರ ಮೋದಿ ಮುಂಬರುವ ಚುನಾವಣೆಯಲ್ಲಿ ಬಹುಮತ ಪಡೆದ ಹ್ಯಾಟ್ರಿಕ್ ಪ್ರಧಾನಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನನ್ನ ಬೆಂಬಲ ಕೇವಲ ನರೇಂದ್ರ ಮೋದಿಗೆ ಮಾತ್ರ ಬಿಜೆಪಿ ಪಕ್ಷಕ್ಕಿಲ್ಲ. ಮೋದಿ ಲೋಕಸಭೆ ಚುನಾವಣೆಯಲ್ಲಿ 300 ಕ್ಷೇತ್ರಗಳನ್ನು ಗೆಲ್ಲಬೇಕು ಎನ್ನುವ ಉದ್ದೇಶದಿಂದ ನನ್ನ ಕೈಲಾದ ಮಟ್ಟಿಗೆ ಪ್ರಯತ್ನಿಸುತ್ತಿದ್ದೇನೆ ಎಂದರು.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲ್ಲುವ ಅಭ್ಯರ್ಥಿಗಳ ಸಂಖ್ಯೆ ಎರಡಂಕಿಗೆ ಇಳಿಯಲಿದೆ. ಚುನಾವಣೆ ನಂತರ ಕಾಂಗ್ರೆಸ್ ವರ್ತಮಾನದ ಪಕ್ಷ ಮತ್ತು ಇತಿಹಾಸದ ಪುಟದಲ್ಲಿ ಸೇರಲಿದೆ ಎಂದು ಯೋಗಾ ಗುರು ಬಾಬಾ ರಾಮದೇವ್ ಹೇಳಿದ್ದಾರೆ.