Webdunia - Bharat's app for daily news and videos

Install App

ರಾಮ್ ಗೋಪಾಲ್ ಯಾದವ್‌ನಿಂದ ಜೀವಬೆದರಿಕೆ: ಅಮರ್ ಸಿಂಗ್

Webdunia
ಸೋಮವಾರ, 23 ಜನವರಿ 2017 (10:11 IST)
ಉತ್ತರ ಪ್ರದೇಶದಲ್ಲಿ ರಾಜಕೀಯ ಪ್ರಹಸನ ಮುಗಿಯುವ ಲಕ್ಷಣಗಳೇ ಕಾಣುತ್ತಿಲ್ಲ. ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಮಾವ ರಾಮ್ ಗೋಪಾಲ್ ಯಾದವ್ ಅವರಿಂದ ತಮಗೆ ಜೀವ ಬೆದರಿಕೆ ಇದೆ ಎಂದು ರಾಜ್ಯಸಭಾ ಸದಸ್ಯ ಅಮರ್ ಸಿಂಗ್ ಆರೋಪಿಸಿದ್ದಾರೆ. 
ವಾರಣಾಸಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಸಿಂಗ್,  ರಾಮಗೋಪಾಲ್ ನನ್ನ ಮೇಲೆ ಗುರಿ ಇಟ್ಟಿದ್ದಾರೆ. ಬಹಿರಂಗವಾಗಿ ಜೀವಬೆದರಿಕೆ ಒಡ್ಡಿದ್ದಾರೆ. ಹೀಗಾಗಿ ನನಗೆ ಝಡ್ ಕ್ಲಾಸ್ ಭದ್ರತೆಯನ್ನೊದಗಿಸಲಾಗಿದೆ ಎಂದು ಹೇಳಿದ್ದಾರೆ. 
 
ಪಕ್ಷದಲ್ಲಿನ ಆಂತರಿಕ ಕಲಹಕ್ಕೆ ತಮ್ಮೆಡೆ ಬೆಟ್ಟು ತೋರಿಸುತ್ತಿರುವುದಕ್ಕೆ ಕಿಡಿಕಾರಿದ ಅವರು, ತಮಗೆ, ಮುಲಾಯಂ ಸಿಂಗ್ ಯಾದವ್, ಶಿವಪಾಲ್ ಯಾದವ್ ಅವರಿಗೆ ಬಾಗಿಲು ತೋರಿಸಿ ಆಗಿದೆ. ಸಮಾಜವಾದಿ ಪರಿವಾರದಲ್ಲಿನ ಬಿಕ್ಕಟ್ಟಿಗೆ ನಾನೇ ಕಾರಣ ಎಂದು ದೂರಲಾಗುತ್ತಿದೆ. ತನ್ನ ತಂದೆಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ಕಿತ್ತು ಅಖಿಲೇಶ್ ಆ ಸ್ಥಾನದಲ್ಲಿ ಆಸೀನರಾಗಿದ್ದಾರೆ. ತಂದೆ- ಮಗನ ಯುದ್ಧದಲ್ಲಿ ನಾನಿರುವೆನಾ ಎಂದು ನಾನು ಉತ್ತರ ಪ್ರದೇಶದ ಜನರಲ್ಲಿ ಕೇಳ ಬಯಸುತ್ತೇನೆ ಎಂದಿದ್ದಾರೆ. 
 
"ನಾನು ಕೆಲವು ಸಂದರ್ಭದಲ್ಲಿ ಅಖಿಲೇಶ್ ಯಾದವ್ ಅವರನ್ನು ಹೊಗಳಿದ್ದೇನೆ, ಅದರರ್ಥ ಅವರು ನನ್ನ ಉಚ್ಚಾಟನೆಯನ್ನು ರದ್ದುಗೊಳಿಸಲಿ ಎಂದು ನಾನು ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದರ್ಥವಲ್ಲ, ಎಂದು ಸಿಂಗ್ ಸ್ಪಷ್ಟ ಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments