ನವದೆಹಲಿ: ಈನಾಡು ಪತ್ರಿಕೆ, ತೆಲುಗು ಈಟಿವಿ ಹಾಗೂ ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ (88) ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಈಚೆಗೆ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ರಾಮೋಜಿ ರಾವ್ ಅವರನ್ನು ಹೈದರಾಬಾದ್‌ನ ಸ್ಟಾರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಮುಂಜಾನೆ 3 ಗಂಟೆ ಸೂಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ರಾಮೋಜಿ ರಾವ್ ನಿಧನಕ್ಕೆ ರಾಜಕೀಯ ನಾಯಕರು ಸೇರಿದಂತೆ ಚಿತ್ರರಂಗದ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮೋದಿ ತಮ್ಮ ಎಕ್ಸ್‌ನಲ್ಲಿ ರಾಮೋಜಿ ಅವರಿಗೆ ಸಂತಾಪ ಸೂಚಿಸಿ ಬರೆದುಕೊಂಡಿದ್ದಾರ ರಾಮೋಜಿ ರಾವ್ ಅವರ ಅಗಲಿಕೆ ಅತ್ಯಂತ ದುಃಖ ತಂದಿದೆ. ಅವರು ಭಾರತೀಯ ಮಾಧ್ಯಮ ಕ್ಷೇತ್ರದಲ್ಲಿ ಕ್ರಾಂತಿಯನ್ನು ಮಾಡಿದ ದಾರ್ಶನಿಕರಾಗಿದ್ದರು. ಅವರ ಕೊಡುಗೆಗಳು ಪತ್ರಿಕೋದ್ಯಮ ಮತ್ತು ಚಲನಚಿತ್ರಗಳ ಜಗತ್ತಿನಲ್ಲಿ ಅಳಿಸಲಾಗದ ಛಾಪು ಮೂಡಿಸಿವೆ. ಅವರು ಮಾಧ್ಯಮ ಮತ್ತು ಮನರಂಜನಾ ಜಗತ್ತಿನಲ್ಲಿ ನಾವೀನ್ಯತೆ ಮತ್ತು ಶ್ರೇಷ್ಠತೆಗಾಗಿ ಹೊಸ ಮಾನದಂಡಗಳನ್ನು ಸ್ಥಾಪಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.
ನವೆಂಬರ್ 16, 1936 ರಂದು ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಪೆದಪರುಪುಡಿ ಗ್ರಾಮದಲ್ಲಿ ಕೃಷಿ ಕುಟುಂಬದಲ್ಲಿ ಜನಿಸಿದ ಅವರು ಮಾಧ್ಯಮ ಲೋಕಕ್ಕೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ.
ವಿಶ್ವದ ಅತಿದೊಡ್ಡ ಥೀಮ್ ಪಾರ್ಕ್ ಮತ್ತು ಫಿಲ್ಮ್ ಸ್ಟುಡಿಯೋ, ರಾಮೋಜಿ ಫಿಲ್ಮ್ ಸಿಟಿಯನ್ನು ಸ್ಥಾಪಿಸಿದರು. ಮಾರ್ಗದರ್ಶಿ ಚಿಟ್ ಫಂಡ್, ಈನಾಡು ಪತ್ರಿಕೆ, ಈಟಿವಿ ನೆಟ್‌ವರ್ಕ್, ರಮಾದೇವಿ ಪಬ್ಲಿಕ್ ಸ್ಕೂಲ್, ಪ್ರಿಯಾ ಫುಡ್ಸ್, ಕಲಾಂಜಲಿ, ಉಷಾಕಿರಣ್ ಮೂವೀಸ್, ಮಯೂರಿ ಫಿಲ್ಮ್ ಡಿಸ್ಟ್ರಿಬ್ಯೂಟರ್ಸ್ ಮತ್ತು ಡಾಲ್ಫಿನ್ ಗ್ರೂಪ್ ಆಫ್ ಹೋಟೆಲ್‌ಗಳು ರಾಮೋಜಿ ರಾವ್ ಒಡೆತನದ ಅನೇಕ ಪಂಪೆನಿಗಳಿವೆ.<>