Publish Date: Fri, 12 Oct 2018 (07:31 IST)
Updated Date: Fri, 12 Oct 2018 (07:33 IST)
ನವದೆಹಲಿ: ಗಂಗಾ ನದಿ ಉಳಿವಿಗಾಗಿ ಹೋರಾಟ ನಡೆಸುತ್ತಿದ್ದ ಜೆಡಿ ಅಗರ್ವಾಲ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಟ್ವೀಟ್ ಮಾಡಿದ ಪ್ರಧಾನಿ ಮೋದಿಗೆ ನಟಿ, ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಟಾಂಗ್ ಕೊಟ್ಟಿದ್ದಾರೆ.
ಗಂಗಾ ನದಿ ಉಳಿವಿಗಾಗಿ ಹೋರಾಟದಲ್ಲಿ ಜೆಡಿ ಅಗರ್ವಾಲ್ ಪಾತ್ರ ದೊಡ್ಡದು. ಅವರ ನಿಧನದಿಂದ ತೀವ್ರ ದುಃಖವಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ನಟಿ ರಮ್ಯಾ ‘ಈಗ ಟ್ವೀಟ್ ಮಾಡಿ ಏನು ಪ್ರಯೋಜನ? ಅವರು ಬದುಕಿದ್ದಾಗ ಅವರ ಮನವಿಗೆ ಸ್ಪಂದಿಸಲಿಲ್ಲ’ ಎಂದು ಟಾಂಗ್ ಕೊಟ್ಟಿದ್ದಾರೆ. ಹಿಂದೆಯೂ ಹಲವು ಬಾರಿ ಪ್ರಧಾನಿ ಮೋದಿ ಟ್ವೀಟ್ ಗೆ ಟಾಂಗ್ ಕೊಟ್ಟು ರಮ್ಯಾ ಟೀಕೆಗೊಳಗಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.