Webdunia - Bharat's app for daily news and videos

Install App

ರೇಪ್ ಎಸಗಿದ ವಿಧವೆಯ ಪಾದ ಮುಟ್ಟಿ ನಮಸ್ಕರಿಸಿದ ಆರೋಪಿಯನ್ನು ಬಿಡುಗಡೆಗೊಳಿಸಿದ ಗ್ರಾ.ಪಂಚಾಯಿತಿ

Webdunia
ಗುರುವಾರ, 4 ಫೆಬ್ರವರಿ 2016 (16:34 IST)
30 ವರ್ಷದ ವಿಧವೆಯೊಬ್ಬಳ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಆಕೆಯ ಪಾದ ಮುಟ್ಟಿ ನಮಸ್ಕರಿಸುವಂತೆ ಆದೇಶ ನೀಡಿ ಆರೋಪದಿಂದ ಮುಕ್ತಗೊಳಿಸಿದ ಹೇಯ ಘಟನೆ ವರದಿಯಾಗಿದೆ. 
 
ಕಳೆದ ಜನೆವರಿ 28 ರಂದು ಆರೋಪಿ, ಏಕಾಂಗಿಯಾಗಿದ್ದ ವಿಧವೆ ಮನೆಗೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ. ರಾತ್ರಿಪೂರ್ತಿ ಆಕೆಯ ಮೇಲೆ ಲೈಂಗಿಕ ಕಿರುಕುಳ ನಡೆಸಿ ಪರಾರಿಯಾಗಿದ್ದ ಎನ್ನಲಾಗಿದೆ.
 
ಘಟನೆಯ ಬಗ್ಗೆ ಯಾರಿಗಾದರೂ ಮಾಹಿತಿ ನೀಡಿದಲ್ಲಿ ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ವಿಧವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುತ್ತಿದ್ದಂತೆ ಗ್ರಾಮದ ಪಂಚಾಯಿತಿಯ ಮುಖ್ಯಸ್ಥ ಆಕೆಗೆ ಕರೆ ಕಳುಹಿಸಿ ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದರು ಎಂದು ಮೂಲಗಳು ತಿಳಿಸಿವೆ.
 
ಪೊಲೀಸ್ ಠಾಣೆಯ ಆವರಣದಲ್ಲಿಯೇ ಪಂಚಾಯಿತಿ ಸಭೆ ನಡೆಸಿದ ಗ್ರಾಮದ ಮುಖ್ಯಸ್ಥ, ಆರೋಪಿಯನ್ನು ಕರೆಸಿ ಅತ್ಯಾಚಾರವೆಸಗಿದ ವಿಧವೆಯ ಪಾದ ಮುಟ್ಟಿ ನಮಸ್ಕರಿಸುವಂತೆ ಆದೇಶಿಸಿದ್ದಾನೆ.ಆರೋಪಿ ಪಾದ ಮುಟ್ಟಿ ನಮಸ್ಕರಿಸಿದ ನಂತರ ಆತನನ್ನು ಪ್ರಕರಣದಿಂದ ಮುಕ್ತಗೊಳಿಸಿ ಆದೇಶ ಹೊರಡಿಸಿದ್ದಾನೆ. 
 
ಘಟನೆಯ ಬಗ್ಗೆ ಯಾರ ಮುಂದೆಯೇ ಹೇಳಿಕೆ ನೀಡದೆ ಮೌನವಾಗಿರು ಎಂದು ಗ್ರಾಮ ಪಂಚಾಯಿತಿ ಮುಖ್ಯಸ್ಥ ಎಚ್ಚರಿಕೆ ಮಿಶ್ರಿತ ಸಲಹೆ ನೀಡಿದ್ದಾನೆ. ಆದರೆ, ಘಟನೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ