Publish Date: Sun, 19 Dec 2021 (10:43 IST)
Updated Date: Sun, 19 Dec 2021 (10:45 IST)
ಜೈಪುರ : 15 ವರ್ಷದ ಬಾಲಕಿಯ ಮೇಲೆ ಒಂಬತ್ತು ದಿನಗಳ ಸಾಮೂಹಿಕ ಅತ್ಯಾಚಾರ ಎಸಗಿದ 13 ಮಂದಿಗೆ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಶೋಕ್ ಚೌಧರಿ ಈ ಕುರಿತು ಮಾತನಾಡಿದ್ದು, ಪೋಕ್ಸೋ ಕಾಯ್ದೆಯಡಿ ಈ ಪ್ರಕರಣವನ್ನು ದಾಖಲು ಮಾಡಲಾಗಿದ್ದು, ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ 17 ಜನರಿಗೆ ಶಿಕ್ಷೆ ವಿಧಿಸಲಾಗಿದೆ.
13 ಮಂದಿಗೆ 20 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿದರೆ, ಉಳಿದ ನಾಲ್ವರು ಅಪ್ರಾಪ್ತ ಅಪರಾಧಿಗಳು ಸ್ಥಳೀಯ ಬಾಲ ನ್ಯಾಯ ಮಂಡಳಿಯಲ್ಲಿ ಪ್ರತ್ಯೇಕವಾಗಿ ಪ್ರಕರಣದ ವಿಚಾರಣೆಯನ್ನು ಎದುರಿಸುತ್ತಿದ್ದಾರೆ ಎಂದು ತಿಳಿಸಿದರು.
ಅತ್ಯಾಚಾರಕ್ಕೆ ಸಹಾಯ ಮಾಡಿದ ಮಹಿಳೆಯ ವಿರುದ್ಧವೂ ಕ್ರಮವನ್ನು ತೆಗೆದುಕೊಳ್ಳಲಾಗಿದ್ದು, ಆಕೆಗೆ 4 ವರ್ಷಗಳ ಕಠಿಣ ಶಿಕ್ಷೆಯನ್ನು ವಿಧಿಸಲಾಗಿದೆ. 20 ವರ್ಷಗಳ ಜೈಲು ಶಿಕ್ಷೆಗೆ ಒಳಗಾದವರಿಗೆ ತಲಾ 10,000 ರೂ. ಮತ್ತು ನಾಲ್ಕು ವರ್ಷಗಳ ಶಿಕ್ಷೆಗೆ ಒಳಗಾದವರಿಗೆ 7,000 ರೂ. ದಂಡ ವಿಧಿಸಲಾಗಿದೆ ಎಂದರು.