Publish Date: Sun, 24 Apr 2022 (14:44 IST)
Updated Date: Sun, 24 Apr 2022 (17:39 IST)
ರಾಂಚಿ : 11 ವರ್ಷದ ಬಾಲಕಿ ಮೇಲೆ ಆರು ಮಂದಿ ಅಪ್ರಾಪ್ತ ಬಾಲಕರು ಅತ್ಯಾಚಾರವೆಸಗಿರುವ ಘಟನೆ ಮಂಗಳವಾರ ರಾತ್ರಿ ಜಾರ್ಖಂಡ್ನ ಖುಂಟಿ ಜಿಲ್ಲೆಯಲ್ಲಿ ನಡೆದಿದೆ.
ಇದೀಗ 10 ರಿಂದ 15 ವರ್ಷದೊಳಗಿನ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮದುವೆ ಸಮಾರಂಭಕ್ಕೆಂದು ಬಾಲಕಿ ಪಕ್ಕದ ಹಳ್ಳಿಗೆ ಹೋಗಿದ್ದಳು. ಒಂದು ನೃತ್ಯ ಕಾರ್ಯಕ್ರಮದ ವೇಳೆ ಬಾಲಕಿ ಬಾಲಕರೊಂದಿಗೆ ಜಗಳವಾಡಿದ್ದಾಳೆ.
ಮಧ್ಯರಾತ್ರಿ ಹೊತ್ತಿಗೆ ಆಕೆ ತನ್ನ ಇಬ್ಬರು ಸ್ನೇಹಿತರ ಜೊತೆಗೆ ಮನೆಗೆ ಹಿಂದಿರುಗುತ್ತಿದ್ದಾಗ, ಅವಳನ್ನು ಹಿಂಬಾಲಿಸಿಕೊಂಡು ಬಂದ ಹುಡುಗರು ಆಕೆಯನ್ನು ತಡೆದು ಏಕಾಂಗಿ ಸ್ಥಳಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ನಂತರ ಸ್ಥಳದಿಂದ ತಪ್ಪಿಸಿಕೊಂಡ ಬಾಲಕಿ ಮತ್ತು ಆಕೆಯ ಇಬ್ಬರು ಸ್ನೇಹಿತರು ಆಕೆಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ನಂತರ ಬಾಲಕಿಯನ್ನು ಹುಡುಕುತ್ತಾ ಬಂದ ಪೋಷಕರನ್ನು ನೋಡಿ ಆರೋಪಿಗಳು ಪರಾರಿಯಾಗಿದ್ದಾರೆ.