Publish Date: Sat, 26 Jan 2019 (07:12 IST)
Updated Date: Sat, 26 Jan 2019 (07:14 IST)
ಅಮರಾವತಿ : ಶಾಲಾ ಮುಖ್ಯೋಪಾಧ್ಯಯರೊಬ್ಬ 2ನೇ ತರಗತಿ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಆಂಧ್ರಪ್ರದೇಶದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯೊಂದರಲ್ಲಿ ನಡೆದಿದೆ.
ಮುಖ್ಯೋಪಾಧ್ಯಾಯ 2ನೇ ತರಗತಿಯ ಎಂಟು ವರ್ಷದ ವಿದ್ಯಾರ್ಥಿ ಮೇಲೆ ಖಾಲಿ ಕೋಣೆಯೊಂದರಲ್ಲಿ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರಕ್ಕೊಳಗಾದ ಬಾಲಕಿ ರಕ್ತಸಿಕ್ತ ಬಟ್ಟೆಯಲ್ಲಿ, ಅಳುತ್ತಾ ಮನೆಗೆ ತೆರಳಿದಾಗ ಪೋಷಕರು ಗಾಬರಿಗೊಂಡಿದ್ದಾರೆ. ತಕ್ಷಣ ಖಾಸಗಿ ಆಸ್ಪತ್ರೆಗೆ ಕರೆದೊಯ್ದಾಗ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.
ಆದರೆ ಪೋಷಕರು ಈ ವಿಚಾರವನ್ನು ಪೊಲೀಸರಿಗೆ ತಿಳಿಸದೇ ಇರುವುದನ್ನು ಕಂಡು ವಿಷಯ ತಿಳಿದ ಸಾಮಾಜಿಕ ಕಾರ್ಯಕರ್ತೆಯೊಬ್ಬರು ಬಾಲಕಿಯ ತಾಯಿಯನ್ನು ಒಪ್ಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಖ್ಯೋಪಾಧ್ಯಾಯನನ್ನು ಬಂಧಿಸಿದ್ದಾರೆ. ಹಾಗೇ ಆಂಧ್ರಪ್ರದೇಶ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಗಂಟ ಶ್ರೀನಿವಾಸ ಅವರು, ಶಾಲಾ ಆಯುಕ್ತರಿಗೆ ಮುಖ್ಯೋಪಾಧ್ಯಾಯನನ್ನು ಅಮಾನತುಗೊಳಿಸಿ, ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.