Webdunia - Bharat's app for daily news and videos

Install App

2ನೇ ತರಗತಿ ಬಾಲಕಿಯ ಮೇಲೆ ಶಾಲಾ ಮುಖ್ಯೋಪಾಧ್ಯಾಯನಿಂದ ಅತ್ಯಾಚಾರ

Webdunia
ಶನಿವಾರ, 26 ಜನವರಿ 2019 (07:12 IST)
ಅಮರಾವತಿ : ಶಾಲಾ ಮುಖ್ಯೋಪಾಧ್ಯಯರೊಬ್ಬ 2ನೇ ತರಗತಿ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಆಂಧ್ರಪ್ರದೇಶದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯೊಂದರಲ್ಲಿ ನಡೆದಿದೆ.


ಮುಖ್ಯೋಪಾಧ್ಯಾಯ 2ನೇ ತರಗತಿಯ ಎಂಟು ವರ್ಷದ ವಿದ್ಯಾರ್ಥಿ ಮೇಲೆ ಖಾಲಿ ಕೋಣೆಯೊಂದರಲ್ಲಿ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರಕ್ಕೊಳಗಾದ ಬಾಲಕಿ ರಕ್ತಸಿಕ್ತ ಬಟ್ಟೆಯಲ್ಲಿ, ಅಳುತ್ತಾ ಮನೆಗೆ ತೆರಳಿದಾಗ ಪೋಷಕರು ಗಾಬರಿಗೊಂಡಿದ್ದಾರೆ. ತಕ್ಷಣ ಖಾಸಗಿ ಆಸ್ಪತ್ರೆಗೆ ಕರೆದೊಯ್ದಾಗ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.


ಆದರೆ ಪೋಷಕರು ಈ ವಿಚಾರವನ್ನು ಪೊಲೀಸರಿಗೆ ತಿಳಿಸದೇ ಇರುವುದನ್ನು ಕಂಡು ವಿಷಯ ತಿಳಿದ ಸಾಮಾಜಿಕ ಕಾರ್ಯಕರ್ತೆಯೊಬ್ಬರು ಬಾಲಕಿಯ ತಾಯಿಯನ್ನು ಒಪ್ಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು  ಮುಖ್ಯೋಪಾಧ್ಯಾಯನನ್ನು ಬಂಧಿಸಿದ್ದಾರೆ. ಹಾಗೇ ಆಂಧ್ರಪ್ರದೇಶ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಗಂಟ ಶ್ರೀನಿವಾಸ ಅವರು, ಶಾಲಾ ಆಯುಕ್ತರಿಗೆ ಮುಖ್ಯೋಪಾಧ್ಯಾಯನನ್ನು ಅಮಾನತುಗೊಳಿಸಿ, ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ