Select Your Language

Notifications

webdunia
webdunia
webdunia
webdunia

ರೇಪ್‌ ಕೇಸ್‌: ಸುಪ್ರೀಂ ಕೋರ್ಟ್‌ಗೂ ಹೋದರು ಬದಲಾಗದ ಪ್ರಜ್ವಲ್‌ ರೇವಣ್ಣ ಹಣೆಬರಹ

Supream Court, Prajwal Revanna Case, Rape Case

Sampriya

ನವದೆಹಲಿ , ಸೋಮವಾರ, 11 ನವೆಂಬರ್ 2024 (14:01 IST)
ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಕರ್ನಾಟಕ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೊರೆ ಹೋದ ಪ್ರಜ್ವಲ್ ರೇವಣ್ಣಗೆ ಅಲ್ಲಿ ಕೂಡಾ ನಿರಾಸೆಯಾಗಿದೆ.

ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ.

ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ತನಗೆ ಜಾಮೀನು ನೀಡಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠ, ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದ್ದು, ಪ್ರಜ್ವಲ್ ರೇವಣ್ಣ ಅವರ ಅರ್ಜಿಯನ್ನು ವಜಾಗೊಳಿಸಿತು. ಹೀಗಾಗಿ ಅವರಿಗೆ ಜೈಲೇ ಗತಿಯಾಗಿದೆ.




Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಮತ್ತೆ ಶುರುವಾಗಲಿದೆ ಮಳೆ, ಯಾವಾಗಿನಿಂದ ಇಲ್ಲಿದೆ ಡೀಟೈಲ್ಸ್