Publish Date: Fri, 28 Dec 2018 (07:01 IST)
Updated Date: Fri, 28 Dec 2018 (07:03 IST)
ಮುಂಬೈ : ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ಅಂಕಲ್ ನಿರಂತರವಾಗಿ ಅತ್ಯಾಚಾರ ಎಸಗಿದ್ದ ಹಿನ್ನಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ ಮಹಾರಾಷ್ಟ್ರದ ಪಿಂಪ್ರಿ ಚಿಂಚವಾಡ್‍ದಲ್ಲಿ ನಡೆದಿದೆ.
ಅತ್ಯಾಚಾರಕ್ಕೊಳಗಾದ ಬಾಲಕಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಆಕೆ ಹಾಗೂ ಆರೋಪಿ ಅಂಕಲ್ ಒಂದೇ ಮನೆಯಲ್ಲಿ ವಾಸವಾಗಿದ್ದರು. ಆರೋಪಿಗೆ ಮದುವೆಯಾಗಿದ್ದು, ಕೆಲ ದಿನಗಳ ಹಿಂದೆ ಆತನ ಪತ್ನಿ ಬಿಟ್ಟು ಹೋಗಿದ್ದಾಳೆ. ಮೇ ತಿಂಗಳಿನಂದು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆತ ಈ ವಿಚಾರವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿ ಹಾಗೂ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ.
ಈ ಹಿನ್ನಲೆಯಲ್ಲಿ ಆಕೆ ಗರ್ಭಿಣಿಯಾದ ಕಾರಣ ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾಗಿ ಅವಧಿಗೂ ಮುನ್ನ ಮಗುವಿಗೆ ಜನ್ಮ ನೀಡಿದ್ದಾಳೆ. ಈ ಸಂಬಂಧ ಆರೋಪಿಯ ವಿರುದ್ಧ ಬಾಲಕಿಯ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ 376 (ಬಲವಂತ ಸಂಭೋಗಕ್ಕೆ ದಂಡನೆ), 506 (ದಂಡನೆ) ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.