ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಜೈಲುಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ ಹಿನ್ನಡೆಯಾಗಿದೆ.
ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಬೇರೆ ನ್ಯಾಯಾಲಯಕ್ಕೆ ವರ್ಗಾಯಿಸಬೇಕೆಂದು ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಗುರುವಾರ ವಜಾ ಮಾಡಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಇನ್ನೊಂದು ನ್ಯಾಯಾಲಯಕ್ಕೆ ವರ್ಗಾಯಿಸಬೇಕು ಎಂದು ಪ್ರಜ್ವಲ್ ಕೋರಿದ್ದರು. ಈ ಹಿಂದೆ ಪ್ರಜ್ವಲ್ ಮನವಿಯನ್ನು ಕರ್ನಾಟಕ ಹೈಕೋರ್ಟ್ ಕೂಡ ಈ ಮನವಿಯನ್ನು ತಿರಸ್ಕರಿಸಿತ್ತು.
ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಪಕ್ಷಪಾತ ತೋರಿದ್ದಾರೆ ಎನ್ನುವ ಪ್ರಜ್ವಲ್ ರೇವಣ್ಣ ವಾದವನ್ನು ಮುಖ್ಯನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾ. ಜಾಯ್‌ಮಲ್ಯ ಬಾಗ್ಚಿ ಅವರಿದ್ದ ನ್ಯಾಯಪೀಠ ತಳ್ಳಿಹಾಕಿ, ಅರ್ಜಿಯನ್ನು ವಜಾ ಮಾಡಿದೆ.
ವಿಚಾರಣೆಯಲ್ಲಿ ಪಕ್ಷಪಾತ ನಡೆದಿದೆ ಎನ್ನುವ ವಾದವನ್ನು ಒಪ್ಪಿಕೊಳ್ಳಲು ನಿರಾಕರಿಸಿದ ಕೋರ್ಟ್, ಹೈಕೋರ್ಟ್ ಮಾಡಿದ ಟಿಪ್ಪಣಿಗಳನ್ನು ತೆಗೆದುಹಾಕಲು ಹೈಕೋರ್ಟ್ ಅನ್ನೇ ಸಮೀಪಿಸಿ ಎಂದು ಹೇಳಿದೆ.
ಹಿರಿಯ ವಕೀಲರಾದ ಸಿದ್ಧಾರ್ಥ್ ಲೂಥ್ರ ಹಾಗೂ ಸಿದ್ಧಾರ್ಥ್ ದಾವೆ ಅವರು ಪ್ರಜ್ವಲ್ ಪರ ಹಾಜರಾದರು.