Select Your Language

Notifications

webdunia
webdunia
webdunia
webdunia

ಕೆಲಸ ಮುಗಿಸಿ ಬರುತ್ತಿದ್ದ ಯುವತಿ ಮೇಲೆ ಅತ್ಯಾಚಾರ!

ಮುಂಬೈ
ಮುಂಬೈ : ನಿನ್ನೆ ಮುಂಜಾನೆ ಯುವತಿಯೊಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಾಲಕರನ್ನು ವಶಕ್ಕೆ ಪಡೆದಿರುವುದಾಗಿ  ಪೊಲೀಸರು ತಿಳಿಸಿದ್ದಾರೆ.

ಮುಂಬೈನ ಗೋವಂಡಿ ಪ್ರದೇಶದಲ್ಲಿ ಕೇಟರಿಂಗ್ ಕೆಲಸ ಮಾಡುತ್ತಿರುವ 19 ವರ್ಷದ ಯುವತಿ ಶನಿವಾರ ಮುಂಜಾನೆ 4.30ರ ಸುಮಾರಿಗೆ ಮನೆಗೆ ವಾಪಸ್ ಆಗುತ್ತಿದ್ದಾಗ ಈ ಘಟನೆ ನಡೆದಿದೆ.

ಮೂರು ಮಂದಿ ಹದಿಹರೆಯದವರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಈ ಕೃತ್ಯವೆಸಗಿದ ಮೊತ್ತಬ್ಬನಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. 

 
ಕೇಟರಿಂಗ್ ಕೆಲಸ ಮಾಡುತ್ತಿರುವ ಯುವತಿ ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದಳು. ಆಗ ಆಕೆಯನ್ನು ತಡೆದು ಆರೋಪಿ ನಿನ್ನೊಂದಿಗೆ ಮಾತನಾಡಬೇಕು ಎಂದಿದ್ದ. ನಂತರ ಆರೋಪಿ ಯುವತಿಯನ್ನು ಕೊಳೆಗೇರಿ ಕೊಠಡಿಯ ಮೇಲಂತಸ್ತಿಗೆ ಕರೆದೊಯ್ದು, ಅಲ್ಲಿ ಆತನ ಸ್ನೇಹಿತರು ಸೇರಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಕೂಡಲೇ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಸಂತ್ರಸ್ತೆ ಪೊಲೀಸರಿಗೆ ಕರೆ ಮಾಡಿ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಗಣರಾಜ್ಯೋತ್ಸವ ಸಕಲ ಸಿದ್ಧತೆ ಹೇಗಿದೆ?