Select Your Language

Notifications

webdunia
webdunia
webdunia
webdunia

ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕಣ್ಣುಗಳಿಗೆ ಚಾಕುವಿನಿಂದ ಇರಿದ ಕಾಮುಕರು

ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕಣ್ಣುಗಳಿಗೆ ಚಾಕುವಿನಿಂದ ಇರಿದ ಕಾಮುಕರು
ಭೋಪಾಲ್ , ಶನಿವಾರ, 25 ಏಪ್ರಿಲ್ 2020 (06:47 IST)

ಭೋಪಾಲ್ : ಲಾಕ್ ಡೌನ್ ನಡುವೆಯೂ  7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಆಕೆಯ ಕಣ್ಣುಗಳಿಗೆ ಚಾಕುವಿನಿಂದ ಇರಿದ ಘಟನೆಯೋಂದು  ಮಧ್ಯಪ್ರದೇಶದ ದಮೋಹ್ ಜಿಲ್ಲೆಯಲ್ಲಿ ನಡೆದಿದೆ.
 


 

7 ವರ್ಷದ ಬಾಲಕಿಯನ್ನು ಅಪಹರಿಸಿ ಅರಣ್ಯ ಮಧ್ಯದಲ್ಲಿರುವ ಪಾಳು ಬಿದ್ದ ಮನೆಗೆ ಎಳೆದೊಯ್ದು, ಆಕೆಯ ಕೈಗಳನ್ನು ಹಗ್ಗದಿಂದ ಕಟ್ಟಿ  ಅತ್ಯಾಚಾರ ಎಸಗಿದ್ದಾರೆ. ಬಳಿಕ ಆಕೆಯ ಕಣ್ಣುಗಳನ್ನು ಚಾಕುವಿನಿಂದ ಇರಿದಿದ್ದಾರೆ. ರಕ್ತದ ಮಡುವಿನಲ್ಲಿ  ಬಿದಿದ್ದ ಬಾಲಕಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

 

ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಶಂಕಿತ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೇ ಆರೋಪಿಯನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಜರುಗಿಸುವುದಾಗಿ ಪೊಲೀಸರು ತಿಳಿಸಿದ್ದಾರೆ. ಹಾಗೇ ಆರೋಪಿಯನ್ನು ಪತ್ತೆ ಹಚ್ಚಲು ಸಹಕರಿಸಿದವರಿಗೆ 10 ಸಾವಿರ ರೂ. ಬಹುಮಾನ ನೀಡುವುದಾಗಿ ದಾಮೋಹ್ ಎಸ್.ಪಿ ಘೋಷಿಸಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

KPSC ಪರೀಕ್ಷೆಗಳು ಮುಂದೂಡಿಕೆ : ಲಾಕ್ ಡೌನ್ ಎಫೆಕ್ಟ್