Publish Date: Sun, 10 Apr 2022 (15:46 IST)
Updated Date: Sun, 10 Apr 2022 (20:51 IST)
ಮುಂಬೈ : ಪುಣೆಯ ರೈಲ್ವೇ ನಿಲ್ದಾಣದ ಬಳಿಯಿರುವ ಬಂಡ್ ಗಾರ್ಡನ್ ಪ್ರದೇಶದ ಸಾರ್ವಜನಿಕ ಶೌಚಾಲಯದಲ್ಲಿ 12 ವರ್ಷದ ಹುಡುಗಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.
ಇತ್ತೀಗಷ್ಟೇ ಪಶ್ಚಿಮಬಂಗಾಳದ ಪ್ರತಾಪ್ಘಡ್ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಸ್ಟ್ಯಾಂಡ್ ಬಳಿಯಿದ್ದ ಸಾರ್ವಜನಿಕ ಶೌಚಾಲಯದಲ್ಲಿ 20 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆದಿತ್ತು.
ಇದೀಗ ಮಹಾರಾಷ್ಟ್ರದಲ್ಲೂ ಅಂತಹದ್ದೇ ಪ್ರಕರಣ ಕಂಡುಬಂದಿದೆ. ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ತಾಯಿ ದೂರು ದಾಖಲಿಸಿದ್ದಾರೆ.
ಸಂತ್ರಸ್ತೆಯು ಬಂಡ್ ಗಾರ್ಡನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದಾರೆ. ಘಟನೆ ನಡೆಯುವ ವೇಳೆ ಆರೋಪಿಗಳು ಆಕೆಯನ್ನು ಹಿಂಬಾಲಿಸಿಕೊಂಡು ಹೋಗಿದ್ದಾನೆ. ನಂತರ ಸಾರ್ವಜನಿಕ ಶೌಚಾಲಯದಲ್ಲಿ ಕೆಳಗೆ ಬೀಳಿಸಿ, ದೈಹಿಕ ಹಿಂಸೆ ನೀಡಿ ಪರಾರಿಯಾಗಿದ್ದಾರೆ.
ಆರೋಪಿಗಳು ಹೋಗುತ್ತಿದ್ದ ವೇಳೆ ಹುಡುಗಿಯ ಚಿಕ್ಕಪ್ಪ ನೋಡಿದ್ದರಿಂದಾಗಿ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.