Select Your Language

Notifications

webdunia
webdunia
webdunia
webdunia

ಶಿಕ್ಷಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

webdunia
ಜೈಪುರ , ಭಾನುವಾರ, 17 ಅಕ್ಟೋಬರ್ 2021 (16:05 IST)
ಜೈಪುರ : ಸರ್ಕಾರಿ ಶಾಲಾ ಶಿಕ್ಷಕನೊಬ್ಬ 7ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮಾಡಿದ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.

ಹೈಪುರದ ಜುಂಝುನು ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಗೆ ಶಿಕ್ಷಕ ಅಶ್ಲೀಲ ಸಂದೇಶಗಳನ್ನು, ಫೋಟೊಗಳನ್ನು ಮತ್ತು ವಿಡಿಯೋಗಳನ್ನು ಕಳಿಸಿದ್ದನಂತೆ. ಅದಾದ ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿ, ಯಾರಿಗೂ ಹೇಳದಂತೆ ಬೆದರಿಕೆ ಒಡ್ಡಿದ್ದಾನೆ. ಆದರೆ ಸಂತ್ರಸ್ತೆ ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ತನ್ನ ಮೇಲಾದ ಕೃತ್ಯದ ಬಗ್ಗೆ ಹೇಳಿಕೊಂಡಿದ್ದಾಳೆ. ಆಕೆಯ ಶಾಲಾ ಪುಸ್ತಕದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ ನಮೂದಾಗಿದ್ದು, ಅದಕ್ಕೆ ಕರೆ ಮಾಡಿ ನೋವು ಹಂಚಿಕೊಂಡಿದ್ದಾಳೆ. ಮಕ್ಕಳ ಸಹಾಯವಾಣಿ ಅಧಿಕಾರಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಕೇರಳದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್