ಶಿಕ್ಷಕರಿಂದ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ!

Webdunia
ಗುರುವಾರ, 9 ಡಿಸೆಂಬರ್ 2021 (09:38 IST)
ಜೈಪುರ : ನಾಲ್ವರು ವಿದ್ಯಾರ್ಥಿನಿಯರ ಮೇಲೆ ಸರ್ಕಾರಿ ಶಾಲೆಯ ಪ್ರಾಂಶುಪಾಲರು ಹಾಗೂ ಒಂಬತ್ತು ಶಿಕ್ಷಕರು ಕಿರುಕುಳ ನೀಡಿ ಅತ್ಯಾಚಾರವೆಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತೆಯ ತಂದೆ ಶಾಲೆಗೆ ಹೊಗದ ಕಾರಣವನ್ನು ವಿಚಾರಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ತೆ 10ನೇ ತರಗತಿಯಲ್ಲಿ ಓದುತ್ತಿದ್ದು, ಕಳೆದ ಒಂದು ವರ್ಷದಿಂದ ಆಕೆಯ ಮೇಲೆ ಪ್ರಾಂಶುಪಾಲರು ಹಾಗೂ ಶಿಕ್ಷಕರು ಸಾಮೂಹಿಕ ಅತ್ಯಾಚಾರವೆಸಗುತ್ತಿದ್ದಾರೆ.
ಜೊತೆಗೆ ಇಬ್ಬರು ಮಹಿಳಾ ಶಿಕ್ಷಕರು ಘಟನೆಯ ವೀಡಿಯೋಗಳನ್ನು ಚಿತ್ರೀಕರಿಸಿದ್ದಾರೆ ಎಂದು ಬಾಲಕಿ ಆರೋಪಿಸಿದ್ದಾಳೆ. ಈ ಬಗ್ಗೆ ಪೊಲೀಸರಿಗೆ ಸಂತ್ರಸ್ತೆಯ ತಂದೆ ದೂರು ನೀಡಿದ್ದಾರೆ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಸಿದ ಸಂದರ್ಭದಲ್ಲಿ ಇನ್ನೂ ಮೂವರು ವಿದ್ಯಾರ್ಥಿನಿಗಳು ಅತ್ಯಾಚಾರಕ್ಕೆ ಒಳಗಾಗಿರುವುದು ತಿಳಿದುಬಂದಿದೆ.
ಇವರು 6ನೇ ತರಗತಿ, 4ನೇ ತರಗತಿ ಮತ್ತು 3ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಗಳಾಗಿದ್ದಾರೆ. ಘಟನೆ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಒಡ್ಡಿದ್ದಾರೆ ಎಂದು ಸಂತ್ರಸ್ತರು ತಿಳಿಸಿದ್ದಾರೆ. 
ಮಹಿಳಾ ಶಿಕ್ಷಕರಿಗೆ ಈ ವಿಷಯವನ್ನು ತಿಳಿಸಿದಾಗ ಅವರು ಶಾಲಾ ಶುಲ್ಕ ಹಾಗೂ ಪುಸ್ತಕಗಳ ಹಣವನ್ನು ಪಾವತಿಸುವುದಾಗಿ ಆಮಿಷ ನೀಡಿದ್ದರು. ಜೊತೆಗೆ ದೂರು ನೀಡದಂತೆಯೂ ತಿಳಿಸಿದ್ದರು ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾರೆ. ಮೂವರು ಶಿಕ್ಷಕರು ಹಾಗೂ ಪ್ರಿನ್ಸಿಪಾಲ್ರು ಹಲವಾರು ಬಾರಿ ಸಂತ್ರಸ್ತರನ್ನು ಮನೆಗೆ ಕರೆದುಕೊಂಡು ಹೋಗಿದ್ದಾರೆ.
ಅಲ್ಲಿ ಅವರು ಮದ್ಯ ಸೇವಿಸಿ ಅತ್ಯಾಚಾರವನ್ನು ಎಸಗಿದ್ದಾರೆ ಎಂದು ವಿಚಾರಣೆ ವೇಳೆ ಸಂತ್ರಸ್ತೆ ತಿಳಿಸಿದ್ದಾರೆ. ಈ ಬಗ್ಗೆ ದೂರು ನೀಡಲು ಹೋದಾಗ ಪ್ರಾಂಶುಪಾಲರು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆಯ ತಂದೆ ತಿಳಿಸಿದ್ದಾರೆ. ಈ ಎಲ್ಲಾ ಆರೋಪಗಳನ್ನು ತಳ್ಳಿಹಾಕಿದ ಪ್ರಾಂಶುಪಾಲರು, ಅಂತಹ ಯಾವುದೇ ಪ್ರಕರಣದ ಬಗ್ಗೆ ತನಗೆ ಮಾಹಿತಿ ಇಲ್ಲ ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳೆದೊಂದು ವರ್ಷದಲ್ಲಿ ದ.ಕ, ಉಡುಪಿ ಜಿಲ್ಲೆಗಳಲ್ಲಿ ರಸ್ತೆ ಅಪಘಾತಕ್ಕೆ ಅಮೂಲ್ಯ ಜೀವಗಳು ಬಲಿಯಾಗಿದೆಷ್ಟು ಗೊತ್ತಾ

ಕಾಂಗ್ರೆಸ್ ಪಕ್ಷದ ಲಿಂಗಾಯತ ಶಾಸಕರ ಸಭೆ ಬಗ್ಗೆ ಎಂಬಿ ಪಾಟೀಲ್ ಸ್ಫೋಟಕ ಮಾಹಿತಿ

ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ, ಅಧಿಕಾರದ ಅಮಲಿನಲ್ಲಿ ಶಾಸಕನ ಗೂಂಡಾ ವರ್ತನೆ

ಬೆಂಗಳೂರು, ಪುಣೆಗೆ ಹೈಸ್ಪೀಡ್ ರೈಲು ಕಾರಿಡಾರ್ ನಿರ್ಮಾಣಕ್ಕೆ ಪ್ರಹ್ಲಾದ್ ಜೋಶಿ ಒತ್ತಾಯ

ಟರ್ಕಿಶ್‌ ವಿಮಾನದಲ್ಲಿ ಟೇಕ್‌ಆಫ್ ಆದ ಸ್ವಲ್ಪ ಸಮಯದಲ್ಲೇ ಎಂಜಿನ್‌ನಲ್ಲಿ ಬೆಂಕಿ, ತಪ್ಪಿದ ದೊಡ್ಡ ದುರಂತ

ಮುಂದಿನ ಸುದ್ದಿ
Show comments