ಇಷ್ಟು ದಿನ ಹೆಣ್ಣು ಮಕ್ಕಳ ಮದುವೆ ವಯಸ್ಸು 18ಕ್ಕೆ ನಿಗದಿಗೊಳಿಸಲಾಗಿತ್ತು. ಅದರ ಬದಲಾವಣೆಯ ಸುಳಿವನ್ನು ಪ್ರಧಾನಿ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಹೆಣ್ಣು ಮಕ್ಕಳ ವಿವಾಹದ ವಯಸ್ಸನ್ನು ಹೊಸದಾಗಿ ನಿಗದಿಗೊಳಿಸುವ ಬಗ್ಗೆ ಮುನ್ಸೂಚನೆ ಕೊಟ್ಟಿದ್ದಾರೆ.
ಹೆಣ್ಣು ಮಕ್ಕಳ ಮದುವೆ ವಯಸ್ಸನ್ನು ನಿಗದಿ ಮಾಡುವ ಬಗ್ಗೆ ಸಮಿತಿಯೊಂದನ್ನು ಈಗಾಗಲೇ ರಚನೆ ಮಾಡಲಾಗಿದೆ.
ನೇಮಕಗೊಂಡಿರುವ ಸಮಿತಿಯು ದೇಶವ್ಯಾಪಿ ಚರ್ಚೆ ನಡೆಸಿ, ಮಾಹಿತಿ ಪಡೆದು ತನ್ನ ವರದಿಯನ್ನು ಕೇಂದ್ರಕ್ಕೆ ಸಲ್ಲಿಕೆ ಮಾಡಲಿದೆ.
ಸಮಿತಿಯು ನೀಡುವ ವರದಿಯ ಆಧಾರದ ಮೇಲೆ ಹೆಣ್ಣು ಮಕ್ಕಳ ಮದುವೆ ವಯಸ್ಸನ್ನು ನಿಗದಿಪಡಿಸಲಾಗುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.