Select Your Language

Notifications

webdunia
webdunia
webdunia
webdunia

ಸರ್ಕಾರ ರಚಿಸದಂತೆ ಎಲ್ಲಾ ಪ್ರಯತ್ನಕ್ಕೂ ಸಿದ್ಧ: ಕಾಮತ್

ಸರ್ಕಾರ ರಚಿಸದಂತೆ ಎಲ್ಲಾ ಪ್ರಯತ್ನಕ್ಕೂ ಸಿದ್ಧ: ಕಾಮತ್
ಪಣಜಿ , ಶನಿವಾರ, 19 ಮಾರ್ಚ್ 2022 (09:58 IST)
ಪಣಜಿ : ಗೋವಾದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಸಾಧ್ಯವಿರುವ ಎಲ್ಲಾ ಪರ್ಯಾಯ ಮಾರ್ಗಗಳನ್ನು ಪರಿಗಣಿಸುತ್ತೇವೆ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗಂಬರ್ ಕಾಮತ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಾ ವಿಧಾನಸಭಾ ಚುನಾವಣೆಯಲ್ಲಿ 20 ಸ್ಥಾನಗಳನ್ನು ಗೆದ್ದಿರುವ ಬಿಜೆಪಿಯು ಐವರು ಪಕ್ಷೇತರರ ಬೆಂಬಲವನ್ನು ಪಡೆದುಕೊಂಡಿದೆ.

ಆದರೆ ಬಿಜೆಪಿಯೂ ಇನ್ನೂ ಹೊಸ ಸರ್ಕಾರ ರಚಿಸಲು ಹಕ್ಕು ಮಂಡಿಸಿಲ್ಲ. ಹಕ್ಕು ಸಾಧಿಸಲು ವಿಫಲವಾಗಿರುವುದನ್ನು ಗಮನಿಸಿದರೆ ಬಿಜೆಪಿಯಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬುದನ್ನು ಸೂಚಿಸುತ್ತದೆ ಎಂದರು.

ಗೋವಾದಲ್ಲಿ ಕಾಂಗ್ರೆಸ್, ಬಿಜೆಪಿಯೇತರ ಪಕ್ಷನ್ನು ರಚಿಸಲು ಎಲ್ಲಾ ಆಯ್ಕೆಗೂ ಮುಕ್ತವಾಗಿದೆ. ಇದರಿಂದಾಗಿ ವಿಧಾನಸಭಾ ಚುನಾವಣೆಯ ತೀರ್ಪನ್ನು ಎತ್ತಿಹಿಡಿಯುತ್ತದೆ ಎಂದು ಹೇಳಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ?