Select Your Language

Notifications

webdunia
webdunia
webdunia
webdunia

ಮಸೀದಿಗಳ ಧ್ವನಿವರ್ಧಕಗಳನ್ನು ತೆಗೆಸಿ : ಠಾಕ್ರೆ

webdunia
ಮುಂಬೈ , ಭಾನುವಾರ, 3 ಏಪ್ರಿಲ್ 2022 (14:12 IST)
ಮುಂಬೈ : ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ತೆಗೆಸದಿದ್ದರೇ ಹನುಮಾನ್ ಚಾಲೀಸ್ ನುಡಿಸುತ್ತೇವೆ ಎಂದು ಮಹಾರಾಷ್ಟ್ರ ನವನಿರ್ಮಾಣಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಎಚ್ಚರಿಕೆ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪ್ರಾರ್ಥನೆ ಮಾಡುವುದಕ್ಕೆ ವಿರೋಧಿಸುವುದಿಲ್ಲ. ನೀವು ನಿಮ್ಮ ಮನೆಯಲ್ಲಿ ಪ್ರಾರ್ಥನೆ ಮಾಡಬಹುದು.

ಆದರೆ ಮಸೀದಿಗಳಲ್ಲಿನ ಧ್ವನಿವರ್ಧಕಗಳಿಂದ ತೊಂದರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಮಸೀದಿಯ ಧ್ವನಿವರ್ಧಕಗಳನ್ನು ತೆಗೆದುಹಾಕುವ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಬಗ್ಗೆ ಕ್ರಮಕೈಗೊಳ್ಳದಿದ್ದರೇ, ಧ್ವನಿವರ್ಧಕಗಳನ್ನು ನಾವೇ ತೆಗೆದು ಹಾಕಿ, ಮಸೀದಿಯ ಮುಂದೆ ಹನುಮಾನ್ ಚಾಲೀಸ್ನ್ನು ನುಡಿಸಲು ಪ್ರಾರಂಭಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಮುಸಲ್ಮಾನರು ಹಲಾಲ್ ಮಾಡಲಿ : ಈಶ್ವರಪ್ಪ