Publish Date: Mon, 26 Jan 2026 (10:16 IST)
Updated Date: Mon, 26 Jan 2026 (10:19 IST)
ನವದೆಹಲಿ: 77ನೇ ಗಣರಾಜ್ಯೋತ್ಸವ ಪ್ರಯುಕ್ತ ಶುಭಾಶಯ ಕೋರಿರುವ ಪ್ರಧಾನಿ ನರೇಂದ್ರ ಮೋದಿ ಭಾರತದ ಹೆಮ್ಮೆ ಮತ್ತು ವೈಭವದ ಸಂಕೇತವಾದ ಈ ರಾಷ್ಟ್ರೀಯ ಹಬ್ಬ ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ ಮತ್ತು ಉತ್ಸಾಹವನ್ನು ತುಂಬಲಿ ಎಂದು ಹೇಳಿದ್ದಾರೆ.
77ನೇ ಗಣರಾಜ್ಯೋತ್ಸವ ಪ್ರಯುಕ್ತ ಇಂದು ದೆಹಲಿಯ ಕರ್ತವ್ಯಪಥದಲ್ಲಿ ಹತ್ತಾರು ವಿಶೇಷತೆಗಳೊಂದಿಗೆ ಗಣರಾಜ್ಯೋತ್ಸವ ಆಚರಣೆ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಈ ಆಚರಣೆಯಲ್ಲಿ ಪಾಲ್ಗೊಳ್ಳುವರು.
ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳನ್ನು ಗಣರಾಜ್ಯೋತ್ಸವ ತಿಳಿಸುತ್ತಿದ್ದೇನೆ. ಭಾರತದ ಹೆಮ್ಮೆ ಮತ್ತು ವೈಭವದ ಸಂಕೇತವಾದ ಈ ರಾಷ್ಟ್ರೀಯ ಹಬ್ಬವು ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ ಮತ್ತು ಉತ್ಸಾಹವನ್ನು ತುಂಬಲಿ. ವಿಕಸಿತ ಭಾರತಕ್ಕಾಗಿ ಸಂಕಲ್ಪವು ಇನ್ನಷ್ಟು ಬಲಗೊಳ್ಳಲಿ ಎಂದು ಹೇಳಿದ್ದಾರೆ.
ಕರ್ತವ್ಯ ಪಥದಲ್ಲಿ ಇಂದು ಪ್ರಜಾಪ್ರಭುತ್ವದ ಸಂಭ್ರಮ, ಸೇನಾ ಶಕ್ತಿ ಹಾಗೂ ವೈವಿಧ್ಯತೆಯ ಅನಾವರಣಕ್ಕೆ ದೇಶ ಸಾಕ್ಷಿಯಾಗಲಿದೆ. ವಿದೇಶಿ ಅತಿಥಿಗಳಾಗಿ ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್‌ಲೇನ್ ಮತ್ತು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೋ ಕೋಸ್ಟ ಭಾಗಿಯಾಗಲಿದ್ದಾರೆ.
ವಂದೇ ಮಾತರಂ ಗೀತೆ 150 ವರ್ಷಗಳನ್ನು ಪೂರೈಸಿರುವ ಹಿನ್ನೆಲೆ ವಂದೇ ಮಾತರಂ ಥೀಂನಲ್ಲೇ ಎಲ್ಲ ಕಾರ್ಯಕ್ರಮಗಳು ನಡೆಯಲಿದೆ. ಆಪರೇಷನ್ ಸಿಂಧೂರ ಮಿಷನ್ ಪರೇಡ್‌ನಲ್ಲಿ ಗಮನ ಸಳೆಯಲಿದೆ. ಬೆಳಗ್ಗೆ 10:30ಕ್ಕೆ ಪರೇಡ್ ಆರಂಭಗೊಳ್ಳಲಿದ್ದು, ಸುಮಾರು 90 ನಿಮಿಷಗಳ ಕಾಲ ಪರೇಡ್ ನಡೆಯಲಿದೆ.