ವೈಯಕ್ತಿಕ ಕಾರಣದಿಂದ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಕೇಂದ್ರ ಸಚಿವೆ ನಜ್ಮಾ ಹೆಪ್ತುಲ್ಲಾ ಸ್ಪಷ್ಟ ಪಡಿಸಿದ್ದಾರೆ.
ಮಂಗಳವಾರ ದಿನ ಅವರು ಕೇಂದ್ರ ಸಚಿವೆ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು ಜನರ ಸೇವೆಗೆ ಅವಕಾಶ ಕಲ್ಪಿಸಿರುವುದಕ್ಕೆ ಪ್ರಧಾನಿ ಮೋದಿ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಸಂಪುಟದಲ್ಲಿ ಸಚಿವೆಯ ಸ್ಥಾನ ನೀಡಿ ಗೌರವ ನೀಡಿರುವುದಕ್ಕೆ ಮತ್ತು ನನಗಿಂತಹ ಅವಕಾಶ ನೀಡಿದ್ದಕ್ಕೆ ಪ್ರಧಾನಿ ಅವರಿಗೆ ನನ್ನ ಧನ್ಯವಾದಗಳು. ಸಚಿವೆಯಾಗಿ ನಾನು ಅಪಾರ ಅನುಭವ ಪಡೆದುಕೊಂಡಿದ್ದೇನೆ ಮತ್ತು ಪ್ರಧಾನಿ ಅವರ 'ಸಬ್ಕಾ ಸಾಥ್, ಸಬ್ಕಾ ವಿಕಾಸ್' ಪರಿಕಲ್ಪನೆಯ ನಿರೀಕ್ಷೆಗಳನ್ನು ಈಡೇರಿಸುವ ದಿಶೆಯಲ್ಲಿ ಕೆಲಸ ನಿರ್ವಹಿಸಿದ್ದೇನೆ ಎಂದು ಅವರು ಹೇಳಿದ್ದಾರೆ.
ಭವಿಷ್ಯದಲ್ಲಿ ನನಗೆ ನೀಡಲಾಗುವ ಎಲ್ಲ ಜವಾಬ್ದಾರಿಗಳನ್ನು ನಿರ್ವಹಿಸಲು ನಾನು ಸದಾ ತಯಾರಾಗಿದ್ದೇನೆ. ವೈಯಕ್ತಿಕ ಕಾರಣಕ್ಕೆ ನಾನು ರಾಜೀನಾಮೆ ನೀಡಿದ್ದೇನೆ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.
ಕೇಂದ್ರದ ಎನ್‌ಡಿಎ ಸರ್ಕಾರದಲ್ಲಿ ಭಾರಿ ಬದಲಾವಣೆಯಾದ ಒಂದು ವಾರದ ನಂತರ ಈಗ ಬೃಹತ್ ಕೈಗಾರಿಕಾ ಖಾತೆಯ ರಾಜ್ಯ ಸಚಿವ ಜಿ.ಎಂ. ಸಿದ್ದೇಶ್ವರ ಮತ್ತು ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವೆ ನಜ್ಮಾ ಹೆಫ್ತುಲ್ಲಾ (76) ರಾಜೀನಾಮೆ ನೀಡಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.