Select Your Language

Notifications

webdunia
webdunia
webdunia
webdunia

ಕೇಂದ್ರ ಸರಕಾರದಿಂದ ಸೇಡಿನ ರಾಜಕೀಯ : ಸೋನಿಯಾ ಗಾಂಧಿ

politics
delhi , ಶುಕ್ರವಾರ, 15 ಡಿಸೆಂಬರ್ 2023 (09:47 IST)
ಕಳೆದ ಹಲವಾರು ವರ್ಷಗಳಿಂದ ನಮ್ಮನ್ನು ಗುರಿಯಾಗಿಸಲಾಗುತ್ತಿದೆ.ಆದರೆ, ಅವರು ಯಶಸ್ವಿಯಾಗುವುದಿಲ್ಲ. ದೇಶದ ಪ್ರತಿಯೊಬ್ಬ ನಾಗರಿಕ ಸಂವಿಧಾನಕ್ಕೆ ಬದ್ಧವಾಗಿರುವಂತೆ ನಾವು ಕಾನೂನಿಗೆ ಬದ್ಧರಾಗಿದ್ದೇವೆ. ಕಾನೂನು ಪ್ರತಿಯೊಬ್ಬರಿಗೂ ಅನ್ವಯಿಸುತ್ತದೆ. ಶೀಘ್ರಧಲ್ಲಿ ಸತ್ಯ ಹೊರಬರುವ ವಿಶ್ವಾಸವಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.
 
ಪ್ರಧಾನಿ ಮೋದಿ ನೇತೃತ್ವದ ಸರಕಾರ ಸುಳ್ಳು ಪ್ರಕರಣಗಳನ್ನು ದಾಖಲಿಸುವ ಮೂಲಕ ನಮ್ಮನ್ನು ಗುರಿಯಾಗಿಸಲಾಗುತ್ತಿದೆ. ಆದರೆ, ಇಂತಹ ಪೊಳ್ಳು ಬೆದರಿಕೆಗಳಿಗೆ ನಾವು ಬಗ್ಗುವುದಿಲ್ಲ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಗುಡುಗಿದ್ದಾರೆ.  
 
ನ್ಯಾಷನಲ್ ಹೆರಾಲ್ಡ್ ಪ್ರಕರಣ ಕುರಿತಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ಕೋರ್ಟ್ ಕೆಲ ಷರತ್ತುಗಳೊಂದಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ.
 
ನಮ್ಮ ವಿರುದ್ಧದ ಪ್ರಕರಣಗಳನ್ನು ದಾಖಲಿಸುತ್ತಿರುವ ವಿಚ್ಚಿದ್ರಕಾರಿ ಷಡ್ಯಂತ್ರಗಳ ಬಗ್ಗೆ ನಮಗೆ ಸಂಪೂರ್ಣ ಅರಿವಿದೆ ಎಂದು ತಿಳಿಸಿದ್ದಾರೆ. ಕೇಂದ್ರ ಸರಕಾರಕ್ಕೆ ಸೂಕ್ತ ಸಮಯದಲ್ಲಿ ತಕ್ಕ ಉತ್ತರ ನೀಡಲಾಗುವುದು ಎಂದು ಎಚ್ಚರಿಸಿದರು.  
 
ಕಾಂಗ್ರೆಸ್ ಪಕ್ಷದ ಮುಖಂಡ ರಾಹುಲ್ ಗಾಂಧಿ ಮಾತನಾಡಿ,  ಇದೊಂದು ಕೇಂದ್ರ ಸರಕಾರದಿಂದ ಸೇಡಿನ ರಾಜಕೀಯ ಸಂಚಾಗಿದೆ. ಪ್ರಧಾನಿ ಮೋದಿ ನಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ವಿಪಕ್ಷಗಳನ್ನು ಬಗ್ಗುಬಡಿಯುವ ಪ್ರಯತ್ನ ಮಾಡುತ್ತಿದ್ದಾರೆ. ನಾನಾಗಲಿ ಅಥವಾ ಕಾಂಗ್ರೆಸ್ ಪಕ್ಷವಾಗಲಿ ಮಣಿಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಕುಡಿದ ಅಮಲಿನಲ್ಲಿ 150 ರೂಪಾಯಿಗೆ ಅಮಾಯಕನ ಕೊಲೆ