ಕಾನೂನಿನಲ್ಲಿ ಮಾನ್ಯತೆಯಿಲ್ಲದಿದ್ದರೂ ಸಲಿಂಗ ವಿವಾಹವಾದ ರಿಯಾ ನೃತ್ಯಪಟು ಯುವತಿಯರು

Sampriya
ಶನಿವಾರ, 8 ನವೆಂಬರ್ 2025 (16:13 IST)
Photo Credit X
ಪಶ್ಚಿಮ ಬಂಗಾಳ: ನೃತ್ಯಪಟುಗಳಾದ ರಿಯಾ ಸರ್ದಾರ್‌ ಮತ್ತು ರಾಖಿ ನಸ್ಕರ್‌ ಅವರು ಪಶ್ಚಿಮ ಬಂಗಾಳದ ಕುಲ್ತಾಲಿ ಬ್ಲಾಕ್‌ನ ಜಲಬೇರಿಯಾದಲ್ಲಿರುವ ಪಲೇರ್ ಚಕ್ ದೇವಸ್ಥಾನದಲ್ಲಿ ಗ್ರಾಮಸ್ಥರ ಸಮ್ಮುಖದಲ್ಲೇ ಮಂಗಳವಾರ ಸಲಿಂಗ ವಿವಾಹವಾಗಿದ್ದಾರೆ. 

ಸಲಿಂಗ ವಿವಾಹಕ್ಕೆ ಭಾರತ ದೇಶದ ಕಾನೂನಿನಲ್ಲಿ ಮಾನ್ಯತೆ ಇಲ್ಲ. ಸುಪ್ರೀಂ ಕೋರ್ಟ್‌ನಲ್ಲಿ ಈ ಬಗ್ಗೆ ವಿಚಾರಣೆ ನಡೆಯುತ್ತಿದೆ. ಕಾನೂನಿನಲ್ಲಿ ಮಾನ್ಯತೆ ಇಲ್ಲದಿದ್ದರೂ ಇಬ್ಬರು ಯುವತಿಯರು ಹಸೆಮಣೆಯೇರಿದ್ದಾರೆ. 

ರಿಯಾ ಮತ್ತು ರಾಖಿ ಅವರು ಸಾಮಾಜಿಕ ಜಾಲತಾಣದ ಮೂಲಕ ಪರಸ್ಪರ ಪರಿಚಯವಾಗಿದ್ದರು. ಪರಿಚಯ ಸ್ನೇಹಕ್ಕೆ ತಿರುಗಿ ನಂತರ ಪ್ರೇಮಾಂಕುರವಾಗಿತ್ತು. ಗ್ರಾಮಸ್ಥರ ಬೆಂಬಲದೊಂದಿಗೆ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದೆ.

ನವೆಂಬರ್ 4ರಂದು ದೇವಸ್ಥಾನದಲ್ಲಿ ಮದುವೆ ಸಮಾರಂಭ ನಡೆದಿದೆ. ವಧುವಿನಂತೆ ಅಲಂಕಾರಗೊಂಡ ರಿಯಾ, ವರನಂತೆ ತಯಾರಾದ ರಾಖಿ ಪರಸ್ಪರ ಹೂ ಮಾಲೆ ಬದಲಾಯಿಸಿಕೊಂಡಿದ್ದಾರೆ. ರಿಯಾ ಅವರು ಮಂದಿರಬಜಾರ್‌ನ ರಾಮೇಶ್ವರಪುರದ ನಿವಾಸಿಯಾಗಿದ್ದಾರೆ.

ನಾವು ಪ್ರಾಪ್ತ ವಯಸ್ಸಿಗೆ ಬಂದಿದ್ದೇವೆ. ನಮ್ಮ ಜೀವನವನ್ನು ನಾವೇ ನಿರ್ಧರಿಸಬಹುದಾಗಿದೆ. ಜೀವನ ಸಂಗಾತಿಯನ್ನು ಆಯ್ಕೆಮಾಡುವಾಗ ಲಿಂಗ ಏಕೆ ಮುಖ್ಯ ಎಂದು ಬಕುಲ್ತಲಾ ನಿವಾಸಿ ರಾಖಿ ಪ್ರಶ್ನಿಸಿದ್ದಾರೆ. ನನ್ನ ಕುಟುಂಬದ ವಿರೋಧದ ನಡುವೆಯೂ ರಿಯಾಳನ್ನು ಮದುವೆಯಾಗಲು ನಾನು ನಿರ್ಧರಿಸಿದ್ದೆ ಎಂದೂ ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ