Select Your Language

Notifications

webdunia
webdunia
webdunia
webdunia

ಬಾಲಕನ ಎಡಗಣ್ಣಿನ ಸಮಸ್ಯೆಗೆ ಬಲಗಣ್ಣಿಗೆ ಶಸ್ತ್ರಚಿಕಿತ್ಸೆ: ನೋಯ್ಡಾದ ವೈದ್ಯರ ಎಡವಟ್ಟಿಗೆ ಆಕ್ರೋಶ

Noida Doctor's Stumble

Sampriya

ಲಖನೌ , ಗುರುವಾರ, 14 ನವೆಂಬರ್ 2024 (15:05 IST)
Photo Courtesy X
ಲಖನೌ: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಆಸ್ಪತ್ರೆಯೊಂದಕ್ಕೆ ಎಡಗಣ್ಣಿನ ಶಸ್ತ್ರಚಿಕಿತ್ಸೆಗೆ ಹೋದ 7 ವರ್ಷದ ಬಾಲಕನಿಗೆ ಅಲ್ಲಿನ ವೈದ್ಯರು ಬಲಗಣ್ಣಿನ ಶಸ್ತ್ರಚಿಕಿತ್ಸೆ ಮಾಡಿದ ಘಟನೆ ನಡೆದಿದೆ.

ನ.12 ರಂದು ಸೆಕ್ಟರ್ ಗಾಮಾ 1ರ ಆನಂದ್ ಸ್ಪೆಕ್ಟ್ರಮ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಬಾಲಕನ ಎಡಗಣ್ಣಿನಿಂದ ಆಗಾಗ ನೀರು ಬರುತ್ತಿತ್ತು. ಇದಕ್ಕಾಗಿ ಬಾಲಕನ ತಂದೆ ನಿತಿನ್ ಭಾಟಿ ಆತನನ್ನು ಆಸ್ಪತ್ರೆಗೆ ತೋರಿಸಿದ್ದರು. ವೈದ್ಯರು ತಪಾಸಣೆ ನಡೆಸಿದ ನಂತರ, ಬಾಲಕನ ಕಣ್ಣಿನಲ್ಲಿ ಪ್ಲಾಸ್ಟಿಕ್ ತರಹದ ವಸ್ತುವಿದೆ. ಅದನ್ನು ಶಸ್ತ್ರಚಿಕಿತ್ಸೆ ಮೂಲಕ ಗುಣಪಡಿಸಬಹುದು ಎಂದು ತಿಳಿಸಿದ್ದರು.

ಆಸ್ಪತ್ರೆಗೆ ₹ 45,000 ಹಣ ಪಾವತಿಸಿ ಬಾಲಕನಿಗೆ ಶಸ್ತ್ರಚಿಕಿತ್ಸೆ ಮಾಡಿಸಲಾಗಿದೆ. ಬಳಿಕ ಬಾಲಕನನ್ನು ಮನೆಗೆ ಕರೆದುಕೊಂಡು ಬಂದ ಮೇಲೆ ಆತನ ತಾಯಿ ಬಲಗಣ್ಣಿನ ಶಸ್ತ್ರಚಿಕಿತ್ಸೆ ಮಾಡಿರುವುದನ್ನು ಗಮನಿಸಿದ್ದಾರೆ. ಮತ್ತೆ ವೈದ್ಯರನ್ನು ಸಂಪರ್ಕಿಸಿ ವಿಚಾರಿಸಿದಾಗ, ವೈದ್ಯರು ಮತ್ತು ಆಸ್ಪತ್ರೆ ಸಿಬ್ಬಂದಿ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಬಾಲಕನ ಕುಟುಂಬಸ್ಥರು ಆರೋಪಿಸಿದ್ದಾರೆ.

ಈ ಸಂಬಂಧ ಬಾಲಕನ ತಂದೆ, ಗೌತಮ್ ಬುದ್ಧ ನಗರದ ಮುಖ್ಯ ವೈದ್ಯಕೀಯ ಅಧಿಕಾರಿಗೆ ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ ವೈದ್ಯರ ಪರವಾನಿಗೆಯನ್ನು ರದ್ದುಪಡಿಸಿ, ಆಸ್ಪತ್ರೆಯನ್ನು ಬಂದ್‌ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್‌ ಶಾಸಕರು ಅಷ್ಟು ದುರ್ಬಲರಾ: ಸಿದ್ದರಾಮಯ್ಯ ಆರೋಪಕ್ಕೆ ಸಿ.ಟಿ.ರವಿ ತಿರುಗೇಟು