Select Your Language

Notifications

webdunia
webdunia
webdunia
webdunia

ಬಿಜೆಪಿಗೆ ಸೇರ್ಪಡೆಯಾದ ಕಾಂಗ್ರೆಸ್ ನಾಯಕಿ ರೀಟಾ ಬಹುಗುಣ ಜೋಷಿ

ಬಿಜೆಪಿಗೆ ಸೇರ್ಪಡೆಯಾದ ಕಾಂಗ್ರೆಸ್ ನಾಯಕಿ ರೀಟಾ ಬಹುಗುಣ ಜೋಷಿ
ನವದೆಹಲಿ , ಗುರುವಾರ, 20 ಅಕ್ಟೋಬರ್ 2016 (19:27 IST)
ಉತ್ತರಪ್ರದೇಶದಲ್ಲಿ ಚುನಾವಣೆ ಕಾವು ಏರತೊಡಗುತ್ತಿರುವಂತೆ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ರೀಟಾ ಬಹುಗುಣ್ ಜೋಷಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಕಾಂಗ್ರೆಸ್ ಪಕ್ಷವನ್ನು ರಾಹುಲ್ ಗಾಂಧಿ ನಡೆಸುತ್ತಿರುವ ರೀತಿ ಮತ್ತು ಸೀಮಿತ ದಾಳಿಯ ಬಗ್ಗೆ ಪ್ರತಿಕ್ರಿಯೆ ಸರಿಯಲ್ಲ. ರಾಹುಲ್ ವರ್ತನೆಯಿಂದಾಗಿ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ ಎಂದು ತಿಳಿಸಿದ್ದಾರೆ.
 
67 ವರ್ಷ ವಯಸ್ಸಿನ ಜೋಷಿ, ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ  ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. 
 
ಉತ್ತರಪ್ರದೇಶ ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷೆಯಾಗಿದ್ದ ಬಹುಗುಣ್, ಪ್ರಧಾನಿ ಮೋದಿ ಮತ್ತು ಬಿಜೆಪಿಗೆ ಪರ್ಯಾಯವಿಲ್ಲ ಎಂದು ತಿಳಿಸಿದ್ದಾರೆ.
 
ಶೀಲಾ ದೀಕ್ಷಿತ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್ ಪಕ್ಷ ಘೋಷಿಸಿದ ಹಿನ್ನೆಲೆಯಲ್ಲಿ ಬೇಸರಗೊಂಡು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಸೇರಿದ ಮಲಯಾಳಂ ಸೂಪರ್ ಸ್ಟಾರ್ ಗೋಪಿ