Select Your Language

Notifications

webdunia
webdunia
webdunia
Friday, 11 April 2025
webdunia

ಪ್ರಧಾನಿ ಮೋದಿ ಸರ್ವಪಕ್ಷ ಸಭೆಗೆ ಎಎಪಿ, ಆರ್ ಜೆಡಿ ಪಕ್ಷಗಳಿಗೆ ಆಹ್ವಾನವಿಲ್ಲ

ಪ್ರಧಾನಿ ಮೋದಿ
ನವದೆಹಲಿ , ಶುಕ್ರವಾರ, 19 ಜೂನ್ 2020 (10:14 IST)
ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ಇಂದು ಕರೆಯಲಾಗಿರುವ ಸರ್ವಪಕ್ಷಗಳ ಸಭೆಗೆ ಹೆಚ್ಚು ಕಡಿಮೆ ಎಲ್ಲಾ ರಾಜಕೀಯ ಪಕ್ಷದ ನಾಯಕರಿಗೆ ಕರೆ ನೀಡಲಾಗಿದ್ದರೂ ಎಎಪಿ ಮತ್ತು ಆರ್ ಜೆಡಿ ಪಕ್ಷಗಳನ್ನು ಕಡೆಗಣಿಸಲಾಗಿದೆ.


ವಿಶೇಷವೆಂದರೆ ಮೋದಿ ವಿರುದ್ಧ ಸದಾ ಕೆಂಡಕಾರುವ ಟಿಎಂಸಿ ನಾಯಕಿ, ಪ.ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಕೂಡಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಈ ಎರಡು ಪ್ರಾದೇಶಿಕ ಪಕ್ಷಗಳಿಗೆ ಆಹ್ವಾನವಿಲ್ಲ. ಈ ಬಗ್ಗೆ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಟ್ವಿಟರ್ ಮೂಲಕ ಟೀಕೆ ಮಾಡಿದ್ದಾರೆ.

ಇಂದು ಸಂಜೆ 5 ಗಂಟೆಗೆ ಸಭೆ ನಡೆಯಲಿದ್ದು, ಸಭೆಯಲ್ಲಿ ಪ್ರಮುಖ ಸೇನಾಧಿಕಾರಿಗಳೂ ಪಾಲ್ಗೊಳ್ಳಲಿದ್ದು, ಪ್ರಧಾನಿ ಮೋದಿ ಚೀನಾ-ಭಾರತ ಸಂಘರ್ಷದ ಬಗ್ಗೆ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಸೂಕ್ಷ್ಮವಾಗಿ ವಿವರಿಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದೇಶದಲ್ಲಿ ಸೋಂಕಿತರ ಸಂಖ್ಯೆ 3,80,532ಕ್ಕೇರಿಕೆ