Publish Date: Sun, 24 Jul 2022 (10:13 IST)
Updated Date: Sun, 24 Jul 2022 (10:14 IST)
ಮುಂಬೈ : ಇನ್ನೆರಡು ವರ್ಷಗಳಲ್ಲಿ ಮುಂಬೈನ ರಸ್ತೆಗಳು ಗುಂಡಿ ಮುಕ್ತವಾಗಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.
ಈ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ನಾನು ಮುಂಬೈ ಮಹಾನಗರ ಪಾಲಿಕೆ ಆಯುಕ್ತರು ಮತ್ತು ಶಾಸಕರ ಜೊತೆ ಸಭೆ ನಡೆಸಿದ್ದೇನೆ. ಜಿಯೋಪಾಲಿಮರ್ ತಂತ್ರವನ್ನು ಬಳಸಿ ಗುಂಡಿಗಳನ್ನು ಮುಚ್ಚುವ ಬಗ್ಗೆ ಚರ್ಚಿಸಿದ್ದು, ತಕ್ಷಣವೇ ರಸ್ತೆ ಗುಂಡಿಗಳನ್ನು ಮುಚ್ಚಲು ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಸದ್ಯ 236 ಕಿ.ಮೀ ರಸ್ತೆಗಳಿಗೆ ಸಿಮೆಂಟ್ ಕಾಂಕ್ರೀಟ್ ಹಾಕುವ ಕಾಮಗಾರಿ ನಡೆಯುತ್ತಿದ್ದು, 400 ಕಿ.ಮೀ ರಸ್ತೆ ಕಾಮಗಾರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. 2023-2024ರಲ್ಲಿ ಇನ್ನೂ 423 ಕಿ.ಮೀ ರಸ್ತೆಯಲ್ಲಿ ಸಿಮೆಂಟ್ ಕಾಂಕ್ರಿಟೀಕರಣ ಕಾಮಗಾರಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುವುದು.