Select Your Language

Notifications

webdunia
webdunia
webdunia
webdunia

ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ 178 ಕೋಟಿ ಅಕ್ರಮ ಹಣ ವಶ: ಚುನಾವಣೆ ಆಯೋಗ

ಚುನಾವಣೆ ಆಯೋಗ
ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಸೋಮುವಾರದಂದು ಅಂತ್ಯವಾಗಿದೆ. ಚುನಾವಣೆ ಸಮರದಲ್ಲಿ ಒಟ್ಟು 178 ಕೋಟಿ ರೂಪಾಯಿಗಳ ಅಕ್ರಮ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. 
 
ತಮಿಳುನಾಡಿನಲ್ಲಿ ಅತಿ ಹೆಚ್ಚು ಅಂದರೆ 112.89 ಕೋಟಿ ರೂಪಾಯಿಗಳ ಅಕ್ರಮ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಉಳಿದ ಅಕ್ರಮ ಹಣವನ್ನು ಇತರ ರಾಜ್ಯಗಳಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದೆ.
 
ಕೇರಳ ರಾಜ್ಯದಲ್ಲಿ 24.66 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಸೂಕ್ತ ಪರಿಶೀಲನೆಯ ನಂತರ ಯಾವುದೇ ರಾಜಕಾರಣಿಗೆ ಅಥವಾ ರಾಜಕೀಯ ಪಕ್ಷಕ್ಕೆ ಸೇರದ 1.67 ಕೋಟಿ ರೂಪಾಯಿಗಳ ಹಣವನ್ನು ಹಿಂತಿರುಗಿಸಲಾಗಿದೆ ಎಂದು ಸ್ಪಷ್ಟನೆ ನೀಡಿದೆ. 
 
ಐದು ರಾಜ್ಯಗಳ ಚುನಾವಣೆಗಳಲ್ಲಿ ತಮಿಳುನಾಡಿನಲ್ಲಿಯೇ ಅತಿ ಹೆಚ್ಚು ಅಕ್ರಮ ಹಣದ ಭರಾಟೆ ಹೆಚ್ಚಾಗಿರುವುದು ಕಂಡುಬಂದಿದ್ದು, ಆದ್ದರಿಂದಲೇ ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳ ಚುನಾವಣೆಯನ್ನು ಮುಂದೂಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. 

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಗರ್ಭಿಣಿ ಮಹಿಳೆ ಸಾವು: ಪವಾಡಸದೃಶವಾಗಿ ಬದುಕುಳಿದ ಮಗು