Select Your Language

Notifications

webdunia
webdunia
webdunia
webdunia

ಮಕ್ಕಳ ಪ್ರಾಥಮಿಕ ಶಿಕ್ಷಣದಲ್ಲಿ ಮಾತೃಭಾಷೆಗೆ ಆದ್ಯತೆ ನೀಡಿ: ಮೋಹನ್ ಭಾಗವತ್

ಮಕ್ಕಳ ಪ್ರಾಥಮಿಕ ಶಿಕ್ಷಣದಲ್ಲಿ ಮಾತೃಭಾಷೆಗೆ ಆದ್ಯತೆ ನೀಡಿ: ಮೋಹನ್ ಭಾಗವತ್
ರಾಯ್‌ಪುರ್ , ಬುಧವಾರ, 25 ನವೆಂಬರ್ 2015 (14:06 IST)
ಪ್ರಾಥಮಿಕ ಶಾಲಾ ಮಟ್ಟದಲ್ಲಿ ಮಾತೃಭಾಷೆ ಕಲಿಕೆ ಉತ್ತಮ ಮಾಧ್ಯಮ. ಪ್ರಾಥಮಿಕ ಹಂತದಲ್ಲಿ ಮಕ್ಕಳ ಕಲಿಕೆಯಲ್ಲಿ ವಿದೇಶಿ ಭಾಷೆಗೆ ಆದ್ಯತೆ ನೀಡುವುದಕ್ಕಿಂತ ಮಾತೃಭಾಷೆಗೆ ಹೆಚ್ಚು ಒತ್ತು ಕೊಡುವುದು ಸೂಕ್ತ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. 
 
ಒಂದು ವೇಳೆ, ಪ್ರಾಥಮಿಕ ಶಿಕ್ಷಣದಲ್ಲಿ ಮಾತೃಭಾಷೆ ಮಾಧ್ಯಮವಾದಲ್ಲಿ ಮುಂದಿನ ಶಿಕ್ಷಣ ಪಡೆಯುವ ಸಂದರ್ಭದಲ್ಲಿ ಇತರ ಭಾಷೆಗಳನ್ನು ಸುಲಭವಾಗಿ ಅರ್ಥೈಸಿಕೊಳ್ಳಬಹುದಾಗಿದೆ. ಆದರೆ, ಬಾಲ್ಯದಲ್ಲಿ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ವಿದೇಶಿ ಭಾಷೆಗೆ ಆದ್ಯತೆ ನೀಡಿದಲ್ಲಿ ಸುಲಭವಾಗಿ ಅರ್ಥವಾಗುವುದು ಕಷ್ಟ ಸಾಧ್ಯವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. 
 
ವಿದ್ಯಾಭಾರತಿ ಇನ್‌ಸ್ಟಿಟ್ಯೂಟ್‌ನಲ್ಲಿ ಆಯೋಜಿಸಲಾಗಿದ್ದ ಬೆಳ್ಳಿ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್, ಮಕ್ಕಳಿಗೆ ಆರಂಭದಲ್ಲಿ ಮಾತೃಭಾಷೆಯಲ್ಲಿ ಶಿಕ್ಷಣ ಕೊಡಿ ಎಂದು ಕರೆ ನೀಡಿದರು.   
 
ಮಾತೃಭಾಷೆಯಲ್ಲಿ ಕಲಿತ ಅನೇಕ ಮಹನೀಯರು ಇಂದು ದೇಶದ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಉದಾಹರಣೆಗಳಿವೆ. ಆದರೆ, ನಾನು ಇತರ ಭಾಷೆಗಳ ವಿರೋಧಿಯಲ್ಲ ಎಂದು ಸ್ಪಷ್ಟಪಡಿಸಿದರು. 
 
ನಮ್ಮ ಮಾತೃಭಾಷೆ ನಮಗೆ ಪರಿಪೂರ್ಣವಾಗಿ ಗೊತ್ತಿರಬೇಕು. ಹಿಂದಿ ಭಾಷೆ ದೇಶವನ್ನು ಒಗ್ಗೂಡಿಸುತ್ತದೆ. ಹಿಂದಿ ಭಾಷಿಕರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ನಮ್ಮ ಮಾತೃಭಾಷೆಯ ಬಗ್ಗೆ ಪರಿಪೂರ್ಣ ಜ್ಞಾನ ಪಡೆದ ನಂತರ ಇತರ ವಿದೇಶಿ ಭಾಷೆಗಳನ್ನು ಕಲಿತಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಲು ಸಹಕಾರಿಯಾಗುತ್ತದೆ ಎಂದು ತಿಳಿಸಿದ್ದಾರೆ.
 
ನಾವು ಯಾವುದೇ ವಿದೇಶಿ ಭಾಷೆ ವಿರೋಧಿಯಲ್ಲ. ಆದರೆ, ನಮ್ಮ ಮಾತೃಭಾಷೆಗೆ ಮೊದಲ ಆದ್ಯತೆ ನೀಡಬೇಕು ಎನ್ನುವುದು ನಮ್ಮ ಬಯಕೆ. ವಿದ್ಯಾ ಭಾರತಿ ಸಂಸ್ಥೆ ಸಂಸ್ಕ್ರತಿ ಆಧಾರಿತ ಶಿಕ್ಷಣ ನೀಡುತ್ತಿರುವುದು ಸಂತಸದ ಸಂಗತಿ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. 

Share this Story:

Follow Webdunia kannada