Select Your Language

Notifications

webdunia
webdunia
webdunia
webdunia

ಮೋದಿ ಸರಕಾರದ ಕಾರ್ಯವೈಖರಿಗೆ ಆರೆಸ್ಸೆಸ್ ಅತೃಪ್ತಿ

ಮೋದಿ ಸರಕಾರದ ಕಾರ್ಯವೈಖರಿಗೆ ಆರೆಸ್ಸೆಸ್ ಅತೃಪ್ತಿ
ಮಥುರಾ , ಶನಿವಾರ, 2 ಸೆಪ್ಟಂಬರ್ 2017 (14:21 IST)
ಉತ್ತರಪ್ರದೇಶದ ಮಥುರಾ ಜಿಲ್ಲೆಯಲ್ಲಿ ನಡೆದ ಆರೆಸ್ಸೆಸ್, ಬಿಜೆಪಿ ಸಮನ್ವಯ ಸಭೆಯಲ್ಲಿ ಪ್ರಧಾನಿ ಮೋದಿ ಸರಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ಮೋದಿ ಸರಕಾರದ ಕಾರ್ಯವೈಖರಿಗೆ ಅತೃಪ್ತಿ ವ್ಯಕ್ತಪಡಿಸಿದ ಆರೆಸ್ಸೆಸ್, ಕೇಂದ್ರ ಸರಕಾರದ ಆರ್ಥಿಕ ನೀತಿಯ ವೈಫಲ್ಯತೆ ಕುರಿತು ತರಾಟೆಗೆ ತೆಗೆದುಕೊಂಡಿದೆ.
 
ಉದ್ಯೋಗ ಸೃಷ್ಚಿಯಲ್ಲಿ ಕೂಡಾ ಕೇಂದ್ರ ಸರಕಾರ ವಿಫಲವಾಗಿದೆ. ಚುನಾವಣೆ ಸಂದರ್ಭದಲ್ಲಿ ದೇಶದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗಿಲ್ಲ ಎಂದು ಮೋದಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.
 
ಆರೆಸ್ಸೆಸ್ ನಾಯಕರು, ಬಿಜೆಪಿ ಸರಕಾರಕ್ಕೆ ತರಾಟೆ ತೆಗೆದುಕೊಂಡು, ಇನ್ನುಳಿದ ಅಧಿಕಾರವಧಿಯಲ್ಲಿ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸುವತ್ತ ಗಮನಹರಿಸುವುದು ಅಗತ್ಯವಾಗಿದೆ ಎಂದು ಸಲಹೆ ನೀಡಿರುವುದಾಗಿ ಮೂಲಗಳು ತಿಳಿಸಿವೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ನೈತಿಕ ಹೊಣೆ ಹೊತ್ತು ತಿಮ್ಮಾಪುರ್ ರಾಜೀನಾಮೆ ನೀಡಲಿ: ಈಶ್ವರಪ್ಪ