Webdunia - Bharat's app for daily news and videos

Install App

ನರೇಂದ್ರ ಮೋದಿ ನೇತೃತ್ವದ ಸರಕಾರವನ್ನು ಆರೆಸ್ಸೆಸ್ ನಡೆಸುತ್ತಿಲ್ಲ: ರಾಜನಾಥ್ ಸಿಂಗ್

Webdunia
ಶನಿವಾರ, 5 ಸೆಪ್ಟಂಬರ್ 2015 (18:23 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರಕಾರವನ್ನು ಆರೆಸ್ಸೆಸ್ ನಡೆಸುತ್ತಿದೆ ಎನ್ನುವ ವಿಪಕ್ಷಗಳ ಆರೋಪವನ್ನು ಕೇಂದ್ರ ಗೃಹ ಖಾತೆ ಸಚಿವ ರಾಜನಾಥ್ ಸಿಂಗ್ ತಳ್ಳಿಹಾಕಿದ್ದಾರೆ.
 
ಪ್ರಧಾನಿ ಮೋದಿ ಆರೆಸ್ಸೆಸ್ ಸಂಘಟನೆಯ ಸ್ವಯಂಸೇವಕರಾಗಿದ್ದು, ಇದರಿಂದ ಬೇರೆಯವರಿಗೆ ಯಾವುದೇ ರೀತಿಯ ತೊಂದರೆಯಿಲ್ಲ ಎಂದು ಹೇಳಿದ್ದಾರೆ.
 
ನಾನು ಕೂಡಾ ಆರೆಸ್ಸೆಸ್ ಸ್ವಯಂಸೇವಕನಾಗಿದ್ದೇನೆ. ಅದರಂತೆ,ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡಾ ಸ್ವಯಂ ಸೇವಕರಾಗಿದ್ದಾರೆ. ಇದು ಬೇರೆಯವರಿಗೆ ಸಮಸ್ಯೆಯಾಗಿಲ್ಲ ಎಂದರು. ಆರೆಸ್ಸೆಸ್ ಸರಕಾರ ನಡೆಸುತ್ತಿದೆ ಎನ್ನುವ ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದರು. 
 
ಆರೆಸ್ಸೆಸ್ ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ಕೇಂದ್ರ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ತೆಗೆದುಕೊಂಡ ರಹಸ್ಯ ಶಪಥ ಉಲ್ಲಂಘಿಸಿದ್ದಾರೆ ಎನ್ನುವ ಆರೋಪಗಳು ಸತ್ಯಕ್ಕೆ ದೂರವಾಗಿವೆ ಎಂದರು.  
 
ಆರೆಸ್ಸೆಸ್ ಆಯೋಜಿಸಿದ ಮೂರು ದಿನಗಳ ಸಮನ್ವಯ ಸಮಿತಿ ಸಭೆಯಲ್ಲಿ ಸರಕಾರದಲ್ಲಿರುವ ಹಿರಿಯ ಬಿಜೆಪಿ ಸಚಿವರು, ನಾಯಕರು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಇತರ ಸಂಘದ ಪದಾಧಿಕಾರಿಗಳೊಂದಿಗೆ ಮುಖಾಮುಖಿಯಾಗಿದ್ದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments