ಬ್ರಿಕ್ಸ್ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಗೋವಾಕ್ಕೆ ಹೋಗುತ್ತಿದ್ದ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ವಿಶೇಷ ವಿಮಾನ ಬೆಂಗಳೂರಿನ ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಹವಾಮಾನ ವೈಪರೀತ್ಯವೇ ಇದಕ್ಕೆ ಕಾರಣವೆನ್ನಲಾಗಿದೆ.
ಗೋವಾದಲ್ಲಿ ಮುಂಜಾನೆಯಿಂದ ಮಂಜು ಮುಸುಕಿದ ವಾತಾವರಣವಿದ್ದರಿಂದ ಪುಟಿನ್ ವಿಮಾನ ತುರ್ತು ಭೂಸ್ಪರ್ಶ ಮಾಡಿತು. ಸುಮಾರು 15 ನಿಮಿಷ, ವಿಮಾನ ನಿಲ್ದಾಣದಲ್ಲಿ ನಿಂತಿದ್ದಾಗ ಪುಟಿನ್ ಅದರಲ್ಲಿ ಕುಳಿತಿದ್ದರು. ಬಳಿಕ ವಿಮಾನ ಗೋವಾದತ್ತ ತೆರಳಿದೆ. ಈ ಬಗ್ಗೆ ವಿಮಾನ ನಿಲ್ದಾಣದ ಅಧಿಕಾರಿಗಳು ಯಾವುದೇ ಮಾಹಿತಿ ನೀಡಿಲ್ಲ.
ಪುಟಿನ್ ಅವರಿದ್ದ ವಿಮಾನ ಸುರಕ್ಷಿತವಾಗಿ ಪಣಜಿ ವಿಮಾನ ನಿಲ್ದಾಣದಲ್ಲಿಳಿದಿದೆ ಎಂದು ತಿಳಿದು ಬಂದಿದೆ.
ಇಂದಿನಿಂದ ಎರಡು ದಿನಗಳ ಕಾಲ ಗೋವಾದ ರಾಜಧಾನಿ ಪಣಜಿಯಲ್ಲಿ ಐದು ರಾಷ್ಟ್ರಗಳನ್ನೊಳಗೊಂಡ 8ನೇ ಬ್ರಿಕ್ಸ್ ಸಮಾವೇಶ ಆರಂಭವಾಗುತ್ತಿದ್ದು, ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ ಆಫ್ರಿಕಾ ದೇಶಗಳು ಪಾಲ್ಗೊಳ್ಳುತ್ತಿವೆ. ರಾಜತಾಂತ್ರಿಕ ಸಂಬಂಧ ವೃತ್ತಿ, ವ್ಯಾಪಾರ ಹಾಗೂ ಹೂಡಿಕೆಯಲ್ಲಿ ಹೆಚ್ಚಳ ಮತ್ತು ಭಯೋತ್ಪಾದನೆ ಸೇರಿದಂತೆ ಅನೇಕ ವಿಷಯಗಳು ಸಮಾವೇಶದಲ್ಲಿ ಚರ್ಚೆಯಾಗುವ ಸಾಧ್ಯತೆಗಳಿವೆ.
ಅಲ್ಲದೇ ಚೀನಾ ಮತ್ತು ರಷ್ಯಾ ಮುಖಂಡರ ಜತೆ ಪ್ರಧಾನಿ ಮೋದಿ ಪ್ರತ್ಯೇಕ ಮಾತುಕತೆಯನ್ನು ಸಹ ನಡೆಸಲಿದ್ದಾಕೆ. ಪುಟಿನ್ ಜತೆ 60,000 ಕೋಟಿ ರೂಪಾಯಿಯ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ.
ಉಗ್ರ ದಾಳಿ ಭೀತಿ ಹಿನ್ನೆಲೆಯಲ್ಲಿ ಬ್ರಿಕ್ಸ್ ಸಮ್ಮೇಳನಕ್ಕೆ ವ್ಯಾಪಕ ಬಂದೋಬಸ್ತ್ ಏರ್ಪಡಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ