Select Your Language

Notifications

webdunia
webdunia
webdunia
webdunia

ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣ: ಬೆಂಗಳೂರು ಮೂಲದ ಉದ್ಯಮಿಯ ಬಂಧನ

Sabarimala temple, gold theft case, Kerala High Court

Sampriya

ತಿರುವನಂತಪುರ , ಶುಕ್ರವಾರ, 17 ಅಕ್ಟೋಬರ್ 2025 (15:16 IST)
Photo Credit X
ತಿರುವನಂತಪುರ: ನಾಡಿನ ಪ್ರಸಿದ್ಧ ಯಾತ್ರಕ್ಷೇತ್ರವಾದ ಶಬರಿಮಲೆ ದೇವಸ್ಥಾನದಲ್ಲಿ ನಡೆದ ಚಿನ್ನ ಕಳವು ಪಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಉದ್ಯಮಿಯನ್ನು ವಿಶೇಷ ತನಿಖಾ ತಂಡದ ಅಧಿಕಾರಿಗಳು ಬಂಧಿಸಿದ್ದಾರೆ.

ತನಿಖೆ ಪೂರ್ಣಗೊಳಿಸಲು ಎಸ್‌ಐಟಿಗೆ ಕೇರಳ ಹೈಕೋರ್ಟ್ ಆರು ವಾರಗಳ ಗಡುವು ನೀಡಿದೆ. ಹೀಗಾಗಿ ಪ್ರಕರಣದ ತನಿಖೆ ಚುರುಕುಗೊಂಡಿದೆ.

ಶಬರಿಮಲೆಯ ಸ್ವರ್ಣ ಲೇಪಿತ ತಾಮ್ರದ ದ್ವಾರಪಾಲಕರ ಮೂರ್ತಿಗಳಲ್ಲಿನ ಬಂಗಾರದ ತೂಕದಲ್ಲಿ ಕಡಿಮೆಯಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಉಣ್ಣಿಕೃಷ್ಣನ್‌ ಪೋಟಿಯನ್ನು ಎಸ್‌ಐಟಿ ಅಧಿಕಾರಿಗಳು ಇಂದು ಬಂಧಿಸಿದ್ದಾರೆ.

ಉದ್ಯಮಿ ಉಣ್ಣಿಕೃಷ್ಣನ್‌ ಪೋಟಿಯನ್ನು ವಶಕ್ಕೆ ಪಡೆದಿದ್ದ ಎಸ್‌ಐಟಿ, ತಿರುವನಂತಪುರದಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ವಿಚಾರಣೆಯ ಬಳಿಕ ಎಸ್‌ಐಟಿ ಅಧಿಕಾರಿಗಳು ಉಣ್ಣಿಕೃಷ್ಣನ್‌ ಪೋಟಿಯನ್ನು ಬಂಧಿಸಿದ್ದು, ವೈದ್ಯಕೀಯ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಶುಕ್ರವಾರ ಮಧ್ಯಾಹ್ನದ ವೇಳೆ ಪೋಟಿಯನ್ನು ಪತ್ತನಂತಿಟ್ಟದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಚಾರಣೆ ವೇಳೆ ಪೋಟಿಯನ್ನು ಕಸ್ಟಡಿಗೆ ಒಪ್ಪಿಸುವಂತೆ ಎಸ್‌ಐಟಿ ಕೋರಲಿದೆ.

ಕೇರಳ ಹೈಕೋರ್ಟ್ ನಿರ್ದೇಶನದ ಮೇರೆಗೆ ಎಸ್‌ಐಟಿ ಎರಡು ಪ್ರಕರಣಗಳ ತನಿಖೆ ನಡೆಸುತ್ತಿದೆ. ದ್ವಾರಪಾಲಕ ಮೂರ್ತಿಗಳಲ್ಲಿ ಚಿನ್ನ ಕಳವು ಜೊತೆಗೆ ದೇವಸ್ಥಾನದ ಗರ್ಭಗುಡಿಯ ಬಾಗಿಲಿನ ಚೌಕಟ್ಟಿನಲ್ಲಿದ್ದ ಚಿನ್ನವೂ ಕಾಣೆಯಾದ ಕುರಿತು ಎಸ್‌ಐಟಿ ತನಿಖೆ ನಡೆಸುತ್ತಿದೆ.  

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯವರ ಮಕ್ಕಳು ಸಾರ್ವಜನಿಕವಾಗಿ ಗೋಮೂತ್ರ ಕುಡಿಯಲಿ: ಪ್ರಿಯಾಂಕ್ ಖರ್ಗೆ ಸವಾಲು